ಕೆಆರ್.ಸರ್ಕಲ್ ದುರ್ಘಟನೆ ಬಳಿಕ ಎಚ್ಚೆತ್ತ ಪಾಲಿಕೆ: ಅಂಡರ್ ಪಾಸ್ ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಮುಂದು!
ಮಳೆಗಾಲದಲ್ಲಿ ನಗರದ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಗಳ ಅಳವಡಿಸುವುದು ಸೇರಿದಂತೆ ಆಯಾ ವಲಯದಲ್ಲಿ ಯಾವುದೇ ರೀತಿ ಸಮಸ್ಯೆಯಾಗದಂತೆ...

ಬೆಂಗಳೂರು: ಮಳೆಗಾಲದಲ್ಲಿ ನಗರದ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಗಳ ಅಳವಡಿಸುವುದು ಸೇರಿದಂತೆ ಆಯಾ ವಲಯದಲ್ಲಿ ಯಾವುದೇ ರೀತಿ ಸಮಸ್ಯೆಯಾಗದಂತೆ ಪರಿಶೀಲಿಸಿ ಕ್ರಮ ಕೈಗೊಳ್ಳವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.
ಬುಧವಾರ ಮಳೆಗಾಲದ ಸಿದ್ಧತೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿರುವ 53 ಕೆಳಸೇತುವೆಗಳ ಪೈಕಿ 41 ಕೆಳಸೇತುವೆಗಳಲ್ಲಿ ಈಗಾಗಲೇ ತುರ್ತು ಕಾಮಗಾರಿಗಳನ್ನು ಕೈಗೆತ್ತಿಗೊಂಡಿದ್ದು, ಉಳಿದ 12 ಕೆಳಸೇತುವೆಗಳಲ್ಲಿ ಕೂಡಲೇ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ನಗರದಲ್ಲಿ 198 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳ ಪೈಕಿ 118 ಪ್ರದಶಗಳಲ್ಲಿ ಶಾಶ್ವರ ಪರಿಹಾರ ನೀಡಲಾಗಿದೆ. ಉಳಿದ 80 ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಪರಿಹಾರ ಒದಗಿಸಲಾಗಿದೆ. ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತೊಮ್ಮೆ ಪರಿಶೀಲಿಸಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ನೀರು ನಿಲ್ಲುವ ಪ್ರದೇಶದಲ್ಲಿ ಪಂಪ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಅರಣ್ಯ ವಿಭಾಗದಿಂದ ಮರಗಳು ಬಿದ್ದಿರುವ ಸ್ಥಳಕ್ಕೆ ತ್ವರಿತವಾಗಿ ಹೋಗಲು ತಂಡಗಳು ಸದಾ ಸನ್ನದ್ಧವಾಗಿರಬೇಕು. ನಾಗರೀಕರಿಂದ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಪರಿಹರಿಸಬೇಕೆಂದು ತಿಳಿಸಲಾಗಿದೆ ಎಂದು ತಿಳಿಸಿದರು.
ಮೆಟ್ರೋ, ಜಲಮಂಡಳಿ, ಬೆಸ್ಕಾಂ, ಕೆಪಿಟಿಸಿಎಲ್, ಗೇಲ್ ಸೇರಿದಂತೆ ಇನ್ನಿತರೆ ಇಲಾಖೆಗಳು ಕೈಗೆತ್ತಿಕೊಳ್ಳುವ ಕಾಮಗಾರಿಗಳಿಂದ ರಸ್ತೆ ಬದಿಯ ಚರಂಡಿಗಳು, ರಸ್ತೆ ಮೇಲ್ಮೈ ಹಾಳಾಗಿ ಮಳೆಗಾಲದಲ್ಲಿ ರಸ್ತೆಗಳ ಮೂಲಕ ನೀರು ನುಗ್ಗುವುದು, ನೀರು ನಿಲ್ಲುತ್ತದೆ. ಆದ್ದರಿಂದ ಶೀಘ್ರವಾಗಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಗಳ ಜೊತೆಗೆ ಸಮನ್ವಯ ಸಭೆ ನಡೆಸಿ ಸಮಸ್ಯೆಗಳನ್ನು ಬಗಹರಿಸಿಕೊಳ್ಳಲುವುದು ಎಂದರು.
ಆಯಾ ವಲಯ ಹಿರಿಯ ಅಧಿಕಾರಿಗಳು ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ಸಂಬಂಧ ರಾಜಕಾಲುವ ಕಾಮಗಾರಿ, ಪ್ರವಾಹಪೀಡಿತ ಪ್ರದೇಶಗಳು, ಕೆಳಸೇತುವೆ ಹಾಗೂ ಮೇಲು ಸೇತುವೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಇದ್ದರೆ ಕೂಡಲೇ ಅದನ್ನು ಬಗೆಹರಿಸುವ ಕೆಲಸ ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


