ರಾಜ್ಯ

ಗ್ಯಾರಂಟಿಗಳ ಜಾರಿಗೆ ಷರತ್ತುಗಳು ಬೇಡ, ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲಿ: ಶಾಮನೂರು ಶಿವಶಂಕರಪ್ಪ

ವಿದ್ಯುತ್ ದರ ಏರಿಕೆಯಿಂದಾಗಿ ಕೈಗಾರಿಕೆಗಳು ಹೆಚ್ಚು ತೊಂದರೆಗೊಳಗಾಗಿದ್ದು, ವಿದ್ಯುತ್ ದರ ಏರಿಕೆಯಿಂದ ಅಕ್ಷರಶಃ ಹೆಣಗಾಡುತ್ತಿವೆ. ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗ್ಯಾರಂಟಿಗಳ ಜಾರಿಗೆ ಷರತ್ತುಗಳು ಬೇಡ, ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲಿ: ಶಾಮನೂರು ಶಿವಶಂಕರಪ್ಪ
ಶಾಮನೂರ್ ಶಿವಶಂಕರಪ್ಪ
Published On :

ದಾವಣಗೆರೆ: ವಿದ್ಯುತ್ ದರ ಏರಿಕೆಯಿಂದಾಗಿ ಕೈಗಾರಿಕೆಗಳು ಹೆಚ್ಚು ತೊಂದರೆಗೊಳಗಾಗಿದ್ದು, ವಿದ್ಯುತ್ ದರ ಏರಿಕೆಯಿಂದ ಅಕ್ಷರಶಃ ಹೆಣಗಾಡುತ್ತಿವೆ. ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಹಿಟ್ಟಿನ ಕಾರ್ಖಾನೆ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಆಗಿರುವ ಶಾಮನೂರು, ಬಿಜೆಪಿ ಮತ್ತು ಕಾಂಗ್ರೆಸ್ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿವೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು ಎಂಬ ವರದಿಗಳಿವೆ. 'ರಾಜ್ಯ ಸರ್ಕಾರ ಇದಕ್ಕೆ ಸಹಿ ಹಾಕಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ, ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಬಾರದು ಮತ್ತು ಅದು ಹಳೆಯ ವಿದ್ಯುತ್ ದರವನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳ ಜಾರಿಗೆ ಷರತ್ತುಗಳನ್ನು ವಿಧಿಸಬಾರದು. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳಬಾರದು. ಕೊಟ್ಟ ಮಾತಿನಂತೆಯೇ ಸರ್ಕಾರ ನಡೆದುಕೊಳ್ಳಬೇಕು. ಮುಂದೆ ವಿದ್ಯುತ್ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕು’ ಎಂದು ಅವರು ಹೇಳಿದರು.

‘ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ–ಬಾಧಕಗಳ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಜಾಗತಿಕ ಲಿಂಗಾಯತ ಮಹಾಸಭಾ ಎಲ್ಲಿದೆ. ಜಾಮದಾರ್ ಒಬ್ಬ ಇದ್ದಾನೆ. ಅವನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಇಲ್ಲ ಅಂದ್ರೆ ನಾವೇ ಕಳಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.