ಪಠ್ಯ ಪುಸ್ತಕ ಪರಿಷ್ಕರಣೆ: ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರ- ಬಿಸಿ ನಾಗೇಶ್
ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಖಂಡಿಸಿದ್ದಾರೆ. ಚಕ್ರವರ್ತಿ ಸೂಲೆಬೆಲೆ, ವೀರ ಸಾವರ್ಕರ್ ಪಠ್ಯವನ್ನು ತೆಗೆಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಖಂಡಿಸಿದ್ದಾರೆ. ಚಕ್ರವರ್ತಿ ಸೂಲೆಬೆಲೆ, ವೀರ ಸಾವರ್ಕರ್ ಪಠ್ಯವನ್ನು ತೆಗೆಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್, ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮತಗಳು ಬೇಕಾಗಿದ್ದು, ಸಿದ್ದರಾಮಯ್ಯ ಅವರದ್ದು ಹಿಂದೂ ವಿರೋಧಿ ಸರ್ಕಾರವಾಗಿದೆ. ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಎಲ್ಲವನ್ನೂ ರಾಜಕೀಯಗೊಳಿಸಲು ಬಯಸಿದ್ದು, ಮತ್ತೆ ಹಿಜಾಬ್ ಜಾರಿಗೊಳಿಸಬಹುದು ಎಂದರು.
ಇದಕ್ಕೂ ಮುನ್ನಾ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯಕ್ರಮದಲ್ಲಿ ಕೆ.ಬಿ.ಹೆಡಗೇವಾರ್ ಅವರ ಪಠ್ಯವನ್ನು ಕೈಬಿಡಲಾಗಿದೆ. ಹಿಂದಿನ ಸರ್ಕಾರ ಕಳೆದ ವರ್ಷ ಏನೆಲ್ಲಾ ಬದಲಾವಣೆಗಳನ್ನು ಮಾಡಿದ್ದರೂ, ಅದನ್ನು ನಾವು ಬದಲಾಯಿಸುತ್ತಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


