ಬಿಪರ್‌ಜಾಯ್ ಚಂಡಮಾರುತ: ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಸೂಚನೆ
ಬಿಪರ್‌ಜಾಯ್ ಚಂಡಮಾರುತ ಗುರುವಾರ ಗುಜರಾತ್‌ಗೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತ ಗುರುವಾರ ಗುಜರಾತ್‌ಗೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಕಡಲ ತೀರಗಳಲ್ಲಿ ಹೆಚ್ಚಿನ ಅಲೆಗಳು ಏಳುವ ಬಗ್ಗೆಯೂ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಪ್ರದೇಶದ ಎಲ್ಲಾ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 19ರವರೆಗೆ ಹೆಚ್ಚಿನ ಅಲೆಗಳು ಏಳುವ ಎಚ್ಚರಿಕೆಯನ್ನು ಜಿಲ್ಲಾ ಅಧಿಕಾರಿಗಳು ಘೋಷಿಸಿದ್ದಾರೆ. ಅಲೆಗಳು ಮೂರರಿಂದ ನಾಲ್ಕು ಮೀಟರ್‌ವರೆಗೆ ತಲುಪಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು ಸಹಾಯವಾಣಿಗಳನ್ನು ತೆರೆಯಲಾಗಿದೆ. ಬೀಚ್‌ಗಳ ಮೇಲೆ ನಿಗಾ ಇಡಲು ಮತ್ತು ಯಾರೂ ಸಮುದ್ರದ ಬಳಿ ಹೋಗದಂತೆ ನೋಡಿಕೊಳ್ಳಲು ಜೀವರಕ್ಷಕರು ಮತ್ತು ಕರಾವಳಿ ಕಾವಲು ಪಡೆಗೆ ನಿರ್ದೇಶಿಸಲಾಗಿದೆ.
ಕರಾವಳಿ ಭಾಗದಲ್ಲಿ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರಿನಲ್ಲೂ ಭಾರಿ ಮಳೆಯಾಗಲಿದೆ.
ಇದೇ ವೇಳೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಹಿತಕರವಾದ ವಾತಾವರಣ ಕಂಡುಬಂದಿತು ಮತ್ತು ದಿನ ಕಳೆದಂತೆ ಬಿಸಿಲು ಕಾಣಿಸಿಕೊಂಡಿತು. ನಗರದಲ್ಲಿ ಕಳೆದ ಒಂದು ವಾರದಿಂದಲೂ ಪ್ರತಿದಿನ ಮಳೆ ಸುರಿಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


