ರಾಜ್ಯ

1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣಕ್ಕೆ ಸಂಪುಟ ಒಪ್ಪಿಗೆ

1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣ ಸಂಬಂಧ ಸಣ್ಣ ನೀರಾವರಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದಿಸಿದೆ.

1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣಕ್ಕೆ ಸಂಪುಟ ಒಪ್ಪಿಗೆ
ವೃಷಭಾವತಿ ನಾಲೆ
Published On :

ಬೆಂಗಳೂರು: 1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣ ಸಂಬಂಧ ಸಣ್ಣ ನೀರಾವರಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದಿಸಿದೆ. 

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ರೂಪಾಯಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿ ಆ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಭೆ ಸಮ್ಮತಿಸಿದೆ.

ಕೋರಮಂಗಲ-ಚಲ್ಲಘಟ್ಟ ಕಣಿವೆಯಲ್ಲಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 126 ಕೆರೆಗಳನ್ನು ತುಂಬಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ವೃಷಭಾವತಿಯಲ್ಲಿ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಿ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡಲು ಯೋಜನೆ ರೂಪಿಸಲಾಗಿದೆ.

ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್​ಕೆ ಪಾಟೀಲ್​, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್​ ವೆಹಿಕಲ್ ಟ್ಯಾಕ್ಸ್​ ವಿನಾಯಿತಿ ನೀಡಲು ತಿರ್ಮಾನಿಸಲಾಗಿದೆ.

ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದುನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಎಚ್ ಕೆ ಪಾಟೀಲ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.