118 ಕೋಟಿ ರೂ. ನಕಲಿ ಬಿಲ್ ಹಗರಣ: 8 ಬಿಬಿಎಂಪಿ ಅಧಿಕಾರಿಗಳು ಅಮಾನತು!
ಬಿಬಿಎಂಪಿಯಲ್ಲಿನ 118 ಕೋಟಿ ರೂಪಾಯಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಎಂಟು ಅಧಿಕಾರಿಗಳನ್ನು ಏಕಕಾಲಕ್ಕೆ ಅಮಾನತು ಮಾಡಲಾಗಿದೆ.

ಬೆಂಗಳೂರು: 118 ಕೋಟಿ ರೂಪಾಯಿ ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಎಂಟು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಂಜಿನಿಯರ್‌ಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಅಲ್ಲದೆ ಹಗರಣದ ತನಿಖೆಗಾಗಿ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಿದೆ.
ಲೋಕಾಯುಕ್ತ ವರದಿಯ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಈ ಕಠಿಣ ಕ್ರಮವನ್ನು ಕೊಂಡಿದ್ದು ಸತೀಶ್ ಸಹಾಯಕ ಕಾರ್ಯಪಾಲಕ ಅಭಿಯಂತರರು, ದೊಡ್ಡಯ್ಯ ಮುಖ್ಯ ಅಭಿಯಂತರರು ಟಿವಿಸಿಸಿ, ಸಿದ್ದರಾಮಯ್ಯ ಸಹಾಯಕ ಅಭಿಯಂತರರು, ಬಸವರಾಜ್ ಪ್ರಭಾರ ಕಾರ್ಯಪಾಲಕ ಅಭಿಯಂತರರು, ಉಮೇಶ್ ಸಹಾಯಕ ಅಭಿಯಂತರು, ವೆಂಕಟಲಕ್ಷ್ಮೀ, ಸಹಾಯಕ ಕಾರ್ಯಾಪಾಲಕ ಅಭಿಯಂತರರು, ಶ್ರೀನಿವಾಸ್ ಕಾರ್ಯಪಾಲಕ ಅಭಿಯಂತರರು, ಶ್ರೀತೇಜ್, ಸಹಾಯಕ ಕಾರ್ಯಾಪಾಲಕ ಅಭಿಯಂತರನನ್ನು ಅಮಾನತು ಮಾಡಿದೆ.
ಆರ್ ಆರ್ ನಗರ ವಲಯದಲ್ಲಿ ಸುಮಾರು 118 ಕೋಟಿ ರುಪಾಯಿ ಕಾಮಗಾರಿಯಲ್ಲಿ ಅಕ್ರಮ ಕಂಡುಬಂದಿದ್ದು ಈ ಬಗ್ಗೆ ಸಂಸದ ಡಿಕೆ ಸುರೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತ ತನಿಖೆಯಲ್ಲಿ ಅಧಿಕಾರಿಗಳು ಆರೋಪ ಮಾಡಿರುವುದು ಸಾಬೀತಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


