ರಾಜ್ಯ

ರಾಜ್ಯದಲ್ಲಿ ಅರಣ್ಯ ವ್ಯಾಪ್ತಿಯನ್ನು ಶೇ.33ಕ್ಕೆ ಹೆಚ್ಚಿಸಲು ಸರ್ಕಾರ ಪ್ರಯತ್ನ: ಈಶ್ವರ ಖಂಡ್ರೆ

ಪ್ರಸ್ತುತ ರಾಜ್ಯದಲ್ಲಿ ಶೇ. 21ರಷ್ಟು ಅರಣ್ಯ ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸರ್ವ ಪ್ರಯತ್ನ ಮಾಡಲಿದೆ ಎಂದು ಅರಣ್ಯ ವನ್ಯಜೀವಿ ಮತ್ತು ಪರಿಸರಕ್ಕಾಗಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಜ್ಯದಲ್ಲಿ ಅರಣ್ಯ ವ್ಯಾಪ್ತಿಯನ್ನು ಶೇ.33ಕ್ಕೆ ಹೆಚ್ಚಿಸಲು ಸರ್ಕಾರ ಪ್ರಯತ್ನ: ಈಶ್ವರ ಖಂಡ್ರೆ
ಈಶ್ವರ್ ಖಂಡ್ರೆ
Published On :

ಚಿತ್ರದುರ್ಗ: ಪ್ರಸ್ತುತ ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸರ್ವ ಪ್ರಯತ್ನ ಮಾಡಲಿದೆ ಎಂದು ಅರಣ್ಯ ವನ್ಯಜೀವಿ ಮತ್ತು ಪರಿಸರಕ್ಕಾಗಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಭೋವಿಮಠದಲ್ಲಿಂದು ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ದರ್ಶನ ಪಡೆದು ಆಶ್ರಮದ ಆವರಣದಲ್ಲಿ ಅರಳಿ ಮತ್ತು ಬೇವಿನ ಸಸಿಗಳನ್ನು ನೆಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಸರ್ಕಾರ ಅರಣ್ಯ ಕಾಯ್ದೆ ವನ್ಯಜೀವಿ ಕಾಯ್ದೆ ಸೇರಿದಂತೆ ಎಲ್ಲ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ ಎಂದರು.

ಅಭಿವೃದ್ಧಿ ಮತ್ತು ಪರಿಸರ ರಕ್ಷಣೆ ಎರಡೂ ಇಂದಿನ ಅಗತ್ಯವಾಗಿದ್ದು, ಸರ್ಕಾರ ಸರ್ಕಾರ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಲಿದೆ. ಅರಣ್ಯ ಒತ್ತುವರಿ ಸಮಸ್ಯೆಗೆ ಜಂಟಿ ಸಮೀಕ್ಷೆ ಪರಿಹಾರವಾಗಿದ್ದು ಕಾಲಮಿತಿ ಒಳಗೆ ಜಂಟಿ ಸಮೀಕ್ಷೆ ನಡೆಸಲು ಕಂದಾಯ ಇಲಾಖೆಯ ಸಹಯೋಗದಲ್ಲಿ ಕಾರ್ಯ ನಿರ್ವಹಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.

ಅರಣ್ಯದಲ್ಲಿ ಮತ್ತು ಪರಿಭಾವಿತ ಅರಣ್ಯ ಪ್ರದೇಶಗಳಲ್ಲಿ ಒತ್ತುವರಿ ಕುರಿತ ದೂರುಗಳಿದ್ದು ಕಾನೂನು ರೀತ್ಯ ಕ್ರಮ ಜರುಗಿಸಲಾಗಿದೆ. ಆದರೆ ಚಿಕ್ಕ ಗುಡಿಸಿಲುಗಳನ್ನು ಕಟ್ಟಿಕೊಂಡು ಅಥವಾ ತುಂಡು ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ವಿಚಾರದಲ್ಲಿ ಮಾನವೀಯತೆಯ ನೆಲೆಘಟ್ಟಿನಲ್ಲಿ ಕಾರ್ಯ ಮಾಡುವುದು ಅನಿವಾರ್ಯ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.