ರಾಜ್ಯ

ಮರ್ಯಾದಾ ಹತ್ಯೆ: ದಲಿತ ಯುವಕನೊಂದಿಗೆ ಪ್ರೀತಿ, ಬಾಲಕಿಯನ್ನು ಕತ್ತು ಹಿಸುಕಿ ಕೊಂದ ತಂದೆ, ಸಹೋದರ!

ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆ, ಸಹೋದರ ಮತ್ತು ಚಿಕ್ಕಪ್ಪ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಮರ್ಯಾದಾ ಹತ್ಯೆ: ದಲಿತ ಯುವಕನೊಂದಿಗೆ ಪ್ರೀತಿ, ಬಾಲಕಿಯನ್ನು ಕತ್ತು ಹಿಸುಕಿ ಕೊಂದ ತಂದೆ, ಸಹೋದರ!
ಮರ್ಯಾದಾ ಹತ್ಯೆ
Published On :

ತುಮಕೂರು: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆ, ಸಹೋದರ ಮತ್ತು ಚಿಕ್ಕಪ್ಪ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

17 ವರ್ಷದ ಸಂತ್ರಸ್ತೆ ನೇತ್ರಾವತಿ ಪರಿಶಿಷ್ಟ ಜಾತಿಗೆ ಸೇರಿದ ಹುಡುಗನನ್ನು ಪ್ರೀತಿಸುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಆಕೆಯ ಕುಟುಂಬ ಈ ಕೃತ್ಯ ಎಸಗಿದೆ.

ಮೂವರು ಆರೋಪಿಗಳಾದ ಪರಶುರಾಮ, ಶಿವರಾಜು, ತುಕಾರಾಂ ಅವರನ್ನು ಬಂಧಿಸಲಾಗಿದೆ ಎಂದು ತುಮಕೂರು ಎಸ್‌ಪಿ ರಾಹುಲ್ ಕುಮಾರ್ ಶಹಾಪುರವಾಡ್ ಶುಕ್ರವಾರ ತಿಳಿಸಿದ್ದಾರೆ.

ಪೋಲೀಸರ ಪ್ರಕಾರ, ಸಂತ್ರಸ್ತೆ ಬುಡಕಟ್ಟು ಜನಾಂಗಕ್ಕೆ ಸೇರಿದವಳು ಮತ್ತು ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಈ ಸಮಯದಲ್ಲಿ ಆಕೆ ಕುಮಾರ್‌ನನ್ನು ಪ್ರೀತಿಸುತ್ತಿದ್ದಳು.

ಎರಡು ವಾರಗಳ ಹಿಂದೆ ಬಾಲಕಿ ಕಾಣೆಯಾಗಿದ್ದಳು. ಆದರೆ, ಆಕೆಯ ಪೋಷಕರು ಆಕೆಯನ್ನು ಹುಡುಕಿ ಜೂನ್ 9ರಂದು ಮನೆಗೆ ಕರೆತಂದಿದ್ದಾರೆ. ಹುಡುಗನೊಂದಿಗಿನ ಸಂಬಂಧವನ್ನು ಕೊನೆಗೊಳಿಸಲು ಹುಡುಗಿ ಒಪ್ಪದಿದ್ದಾಗ, ಆರೋಪಿಗಳು ವಿಷ ಕುಡಿಯುವಂತೆ ಒತ್ತಾಯಿಸಿದ್ದಾರೆ.

ಬಾಲಕಿ ಪ್ರತಿರೋಧ ತೋರಿದಾಗ ಆಕೆಯ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಸೇರಿ ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ವಿಷ ಸೇವಿಸಿ ಬಾಲಕಿ ಸಾವಿಗೀಡಾಗಿದ್ದಾಳೆ ಎಂದು ಹೇಳಿಕೊಂಡು ಕುಟುಂಬದವರು ಆಕೆಯ ಅಂತ್ಯ ಸಂಸ್ಕಾರವನ್ನೂ ಮಾಡಿದ್ದಾರೆ.

ಆದರೆ, ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಆರಂಭದಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.