ಮಹಿಳೆಯರ "ಶಕ್ತಿ"ಗೆ ಮುರಿದುಬಿತ್ತು ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು!
ಒಂದು ಪ್ರಕರಣದಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಧಾವಿಸಿ ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು ಮುರಿದುಬಿದ್ದಿದೆ.

ಕೊಳ್ಳೆಗಾಲ: ಮಹಿಳೆಯರಿಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವಾರ ಕಳೆದಿದ್ದು, ಮಹಿಳೆಯರ ಸಂಖ್ಯೆ ಏರಿಕೆಯಾಗಿದ್ದರ ಪರಿಣಾಮ ನಿರ್ವಾಹಕರು ಉಳಿದವರಿಗೆ ಟಿಕೆಟ್ ನೀಡಲಿಕ್ಕೂ ಪರದಾಡಬೇಕಾದಂಥ ಘಟನೆಗಳೂ ವರದಿಯಾಗಿದೆ.
ಕೆಲವೆಡೆ ಸಂಭಾವ್ಯ ಅನಾಹುತಗಳು ತಪ್ಪಿವೆ. ಇಂಥದ್ದೇ ಒಂದು ಪ್ರಕರಣದಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಧಾವಿಸಿ ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು ಮುರಿದುಬಿದ್ದಿದೆ.
ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ವರದಿಯಾಗಿದೆ. ನಾಳೆ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಹಿಳೆಯರು ತೋರಿದ ಶಕ್ತಿಗೆ ಬಸ್ವೊಂದರ ಬಾಗಿಲು ಕಳಚಿ ಹೋಗಿದೆ. ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು ಮುರಿದು ಅದನ್ನು ನಿರ್ವಾಹಕ ಕೈಲಿ ಹಿಡಿದಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರತಿದಿನ ಲಕ್ಷಾಂತರ ಮಹಿಳೆಯರು ಅಗತ್ಯ ದಾಖಲೆಗಳನ್ನ ತೋರಿಸಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ. ಈ ನಡುವೆ ಟಿಕೆಟ್ ಕಲೆಕ್ಷನ್ ಆಗಿಲ್ಲ ಎಂದು ಬೇಸತ್ತ ಚಾಲಕನೊಬನ್ಬ ಮಹಿಳೆಯರ ಮೇಲೆಯೇ ಬಸ್ ಹತ್ತಿಸಲು ಮುಂದಾಗಿದ್ದ ಪ್ರಸಂಗವೊಂದು ತುಮಕೂರು ಜಿಲ್ಲೆಯ ಕೊರಟಗೆರೆಯ ನಾಗೇನಹಳ್ಳಿ ಗೇಟ್ ಬಳಿ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


