ಕಲಬುರಗಿ: ತನ್ನಿಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ
ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಕಲಬುರಗಿ: ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು 36 ವರ್ಷದ ಹಣಮಂತ ಮಕ್ಕಳಾದ 9 ವರ್ಷದ ಓಕಾಂ ಹಾಗೂ 6 ವರ್ಷದ ಅಕ್ಷತಾ ಎಂದು ಗುರುತಿಸಲಾಗಿದೆ.
ಹಣಮಂತ ಪತ್ನಿ ಮಕ್ಕಳೊಂದಿಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದರು. ಆದರೆ ನಿನ್ನೆ ರಾತ್ರಿ ಮಕ್ಕಳೊಂದಿಗೆ ಸ್ವಗ್ರಾಮಕ್ಕೆ ಬಂದಿದ್ದು ನಿನ್ನೆಯೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಮತ್ತು ಮಕ್ಕಳ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿದ್ದು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


