ರಾಜ್ಯ

ಪ್ರಯಾಣಿಕನ ಸೋಗಿನಲ್ಲಿ ಕ್ಯಾಬ್ ಚಾಲಕನ ದರೋಡೆ: ಯುವಕ ಬಂಧನ

ಪ್ರಯಾಣಿಕರ ಸೋಗಿನಲ್ಲಿ ಆ್ಯಪ್ ಆಧಾರಿತ ಕ್ಯಾಬ್ ಚಾಲಕರನ್ನು ದರೋಡೆ ಮಾಡುತ್ತಿದ್ದ 23 ವರ್ಷದ ಯುವಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಪ್ರಯಾಣಿಕನ ಸೋಗಿನಲ್ಲಿ ಕ್ಯಾಬ್ ಚಾಲಕನ ದರೋಡೆ: ಯುವಕ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಆ್ಯಪ್ ಆಧಾರಿತ ಕ್ಯಾಬ್ ಚಾಲಕರನ್ನು ದರೋಡೆ ಮಾಡುತ್ತಿದ್ದ 23 ವರ್ಷದ ಯುವಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಎಚ್‌ಎಎಲ್‌ನ ರೆಡ್ಡಿ ಪಾಳ್ಯದ ನಿವಾಸಿ ವಿನಯ್ ಎನ್ ಎಂದು ಗುರುತಿಸಲಾಗಿದೆ. ಜೂನ್.9 ರ ಬೆಳಗಿನ ಜಾನ 4 ಗಂಟೆಗೆ ವೈಟ್ ಫೀಲ್ಡ್ ನಿಂದ 4 ಗಂಟೆಗಳ ಕಾಲದವರೆಗೆ ಕ್ಯಾಬ್ ವೊಂದನ್ನು ಬುಕ್ ಮಾಡಿದ್ದಾನೆ.

ಕ್ಯಾಬ್ ಹತ್ತಿದ ಬಳಿಕ ಚಾಲಕನನ್ನು ಬೆದರಿಸಿ, ರೂ.15,000 ನಗದು, ಡೆಬಿಟ್ ಕಾರ್ಡ್ ಪಡೆದು ಪರಾರಿಯಾಗಿದ್ದಾನೆ. ಈ ಸಂಬಂಧ ಚಾಲಕ ನೀಡಿದ ದೂರನ್ನು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನಿಂದ ರೂ.10,700 ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಆರೋಪಿ ಇದೇ ರೀತಿ 4 ದರೋಡೆಗಳನ್ನು ಮಾಡಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.