ರಾಮನಗರ: ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ; ಅಕ್ಕನ ಸಾವು, ತಂಗಿಯ ಸ್ಥಿತಿ ಗಂಭೀರ
ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾ ನಗರದಲ್ಲಿ ಜಮೀನಿನಲ್ಲಿ ಕೆಲಸ ಮಾಡಲು ಹೋಗುತ್ತಿದ್ದ ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ.

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾ ನಗರದಲ್ಲಿ ಜಮೀನಿನಲ್ಲಿ ಕೆಲಸ ಮಾಡಲು ಹೋಗುತ್ತಿದ್ದ ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ.
ಕಾಡಾನೆ ದಾಳಿಯಲ್ಲಿ 50 ವರ್ಷದ ಜಯಮ್ಮ ಎಂಬುವರು ಮೃತಪಟ್ಟಿದ್ದರೆ ಅವರ ತಂಗಿ 45 ವರ್ಷದ ವೆಂಕಲಕ್ಷ್ಮಮ್ಮನ ಪರಿಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಕನಕಪುರ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ ಆನೆ ತುಳಿತಕ್ಕೆ ಇಬ್ಬರು ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೆ ಕಾಡಾನೆ ದಾಳಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


