ಪಬ್ ಗಳ ಮೇಲೆ ಪೊಲೀಸರ ದಾಳಿ: ನಾಲ್ವರು ವಿದೇಶಿಯರು ಸೇರಿ 87 ಮಂದಿ ಮಹಿಳೆಯರ ರಕ್ಷಣೆ
ನಗರದ ಮೂರು ಪಬ್ ಗಳ ಮೇಲೆ ಸಿಸಿಬಿ ಪೊಲೀಸರು ಭಾನುವಾರ ದಾಳಿ ನಡೆಸಿದ್ದು, ನಾಲ್ವರು ವಿದೇಶಿಯರು ಸೇರಿ 87 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು: ನಗರದ ಮೂರು ಪಬ್ ಗಳ ಮೇಲೆ ಸಿಸಿಬಿ ಪೊಲೀಸರು ಭಾನುವಾರ ದಾಳಿ ನಡೆಸಿದ್ದು, ನಾಲ್ವರು ವಿದೇಶಿಯರು ಸೇರಿ 87 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಶನಿವಾರ ರಿಚ್‌ಮಂಡ್ ರಸ್ತೆಯಲ್ಲಿರುವ ಫ್ಯೂಯಲ್ ರೆಸ್ಟೋಬಾರ್, ಅಮರಜ್ಯೋತಿ ಎಚ್‌ಬಿಸಿಎಸ್ ಲೇಔಟ್‌ನ ಕ್ಲಬ್ 7, ಹೆಣ್ಣೂರು ಮುಖ್ಯರಸ್ತೆಯಲ್ಲಿರುವ ಶೇಗನ್ ಬಾರ್ ಆ್ಯಂಡ್ ಕಿಚನ್ ಮೇಲೆ ಸಿಸಿಬಿ ಮಹಿಳಾ ರಕ್ಷಣಾ ದಳ ದಾಳಿ ನಡೆಸಿತ್ತು. ದಾಳಿ ವೇಳೆ 9 ಮಂದಿಯನ್ನು ಬಂಧನಕ್ಕೊಳಪಡಿಸಿದೆ.
ಪರವಾನಗಿ ಇಲ್ಲದೆ ಬಾರ್ ನಡೆಸುತ್ತಿರುವುದು, ನಿಯಮ ಉಲ್ಲಂಘಿಸಿ ಅವಧಿ ಮೀರಿ ಬಾರ್-ಬರ್ ತೆರೆದು ಹೊರರಾಜ್ಯಗಳಿಂದ ಯುವತಿಯನ್ನು ಕರೆಸಿ ಅಸಭ್ಯ ಉಡುಪು ತೊಡಿಸಿ ಗ್ರಾಹಕರಿಗೆ ಲೈಂಗಿಕ ಪ್ರಚೋದಿಸುವ ಚಟುವಟಿಕೆಗಳಲ್ಲಿ ತೊಡಗಿರುವ ಕುರಿತು ಖಚಿತ ಮಾಹಿತಿಗಳ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಫ್ಯುಯೆಲ್ ರೆಸ್ಟೋಬಾರ್ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮೂವರುನ್ನು ಬಂಧನಕ್ಕೊಳಪಡಿಸಲಾಗಿದೆ. ಬಾರ್ ನಲ್ಲಿದ್ದ 19 ಮಂದಿಯರನ್ನು ರಕ್ಷಣೆ ಮಾಡಿದ್ದಾರೆ. ಕ್ಲಬ್ 7ರಲ್ಲಿ ಸಿಸಿಬಿ ಮೂವರು ಬಂಧನಕ್ಕೊಳಪಡಿಸಲಾಗಿದ್ದು, 55 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಶೆಗಾನ್ ಬಾರ್ ಆ್ಯಂಡ್ ಕಿಚನ್ ಮೇಲೆ ನಡೆದ ದಾಳಿಯಲ್ಲಿ ಮೂವರನ್ನು ಬಂಧನಕ್ಕೊಳಪಡಿಸಲಾಗಿದ್ದು, 13 ಮಹಿಳೆಯರನ್ನು ರಕ್ಷಣೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


