ಕೊಡಗಿನ ಅರಣ್ಯದಲ್ಲಿ ಹುಲಿಯ ಮೃತದೇಹ ಪತ್ತೆ
ಕೊಡಗಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.

ಮಡಿಕೇರಿ: ಕೊಡಗಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.
ಹುಲಿಯು ಅರಣ್ಯ ಪ್ರದೇಶದ ಜಲಮೂಲದ ಪಕ್ಕದಲ್ಲಿ ಸತ್ತು ಬಿದ್ದಿರುವುದು ಪತ್ತೆಯಾಗಿದ್ದು, ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ.
ಈ ಹುಲಿ ಸೋಮವಾರ ಬೆಳಗಿನ ಜಾವ ಅರಣ್ಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ. ಆದರೆ ಅದಕ್ಕೆ ಸರಿಯಾಗಿ ನಡೆಯಲು ಸಾಧ್ಯವಾಗದೆ ಹುಲಿ ಗಾಯಗೊಂಡಿರುವುದನ್ನು ಅರಣ್ಯಾಧಿಕಾರಿಗಳು ಗಮನಿಸಿದ್ದಾರೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿಎನ್ ಮೂರ್ತಿ ಅವರು ತಿಳಿಸಿದ್ದಾರೆ.
ಗಾಯಗೊಂಡ ಹುಲಿಗೆ ಚಿಕಿತ್ಸೆ ನೀಡಲು ಇಲಾಖೆಯು ಅಗತ್ಯ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಅದನ್ನು ಸೆರೆಹಿಡಿಯಲು ಸಿದ್ಧತೆ ನಡೆಸಿತು. ಅದೇ ರೀತಿ ದುಬಾರೆಯಿಂದ ಪಳಗಿದ ಆನೆಗಳನ್ನು ಸ್ಥಳಕ್ಕೆ ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗುವ ಮೊದಲು ಹುಲಿ ಮೃತಪಟ್ಟಿದೆ. ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಈ ಹುಲಿ ವಲಸೆ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯದೊಳಗಿರುವ ಜಲಮೂಲದ ಪಕ್ಕದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
“ಹುಲಿಯು ಇನ್ನೊಂದು ಗಂಡು ಹುಲಿಯೊಂದಿಗೆ ಸಂಘರ್ಷದಲ್ಲಿ ತೊಡಗಿರುವ ಸಾಧ್ಯತೆಯಿದೆ. ಈ ಹುಲಿಗೆ ಅನೇಕ ಗಾಯಗಳಾಗಿವೆ. ಅದರೂ ಸಾವಿನ ಹಿಂದಿನ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಎನ್ ಮೂರ್ತಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


