ರಾಜ್ಯ

ಬಿಎಂಟಿಸಿ ಬಸ್‌ನಲ್ಲಿ ನಗರ ಪೊಲೀಸ್ ಕಮಿಷನರ್ ಪ್ರಯಾಣ, ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗೃತಿ!

ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳು ಸೋಮವಾರ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು.

ಬಿಎಂಟಿಸಿ ಬಸ್‌ನಲ್ಲಿ ನಗರ ಪೊಲೀಸ್ ಕಮಿಷನರ್ ಪ್ರಯಾಣ, ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗೃತಿ!
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದರು
Published On :

ಬೆಂಗಳೂರು: ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳು ಸೋಮವಾರ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು. 

ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಗರ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಮಹಿಳೆಯರ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳಲು ಒತ್ತು ನೀಡಿದ ಒಂದು ವಾರದ ನಂತರ ಪೊಲೀಸ್ ಅಧಿಕಾರಿಗಳು ಬಸ್ಸುಗಳಲ್ಲಿ ಪ್ರಯಾಣಿಸಿ ಜಾಗೃತಿ ಮೂಡಿಸಿದರು.

ಕಳೆದ ವಾರ, ನಗರದ ಪೊಲೀಸ್ ಉನ್ನತ ಅಧಿಕಾರಿಗಳು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಹೊಯ್ಸಳ ವಾಹನಗಳಲ್ಲಿ ಕೆಲವು ಗಂಟೆಗಳ ಕಾಲ ಗಸ್ತು ತಿರುಗಿದರು. ದಯಾನಂದ ಮತ್ತು ಅವರ ತಂಡ ಮಹಿಳಾ ಪ್ರಯಾಣಿಕರೊಂದಿಗೆ ಅವರ ಸಮಸ್ಯೆಗಳನ್ನು ಆಲಿಸಿದರು. 

ಮಹಿಳೆಯರ ಸುರಕ್ಷತೆಗಾಗಿ ನಗರ ಪೊಲೀಸರು ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ ಅವರು, ತುರ್ತು ಸಂದರ್ಭಗಳಲ್ಲಿ 112 ಗೆ ಕರೆ ಮಾಡಲು ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.