ಸೀಟಿಗಾಗಿ ಜುಟ್ಟು ಹಿಡಿದು ಬಡಿದಾಡಿಕೊಂಡ ನೀರೆಯರು: ಬಸ್ ನಲ್ಲಿ ನಾರಿ 'ಶಕ್ತಿ' ಅನಾವರಣ; ವಿಡಿಯೋ ವೈರಲ್
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಹೆಣ್ಮಕ್ಕಳಿಗೆ ಭಾರೀ ಲಾಭ ಕೊಟ್ಟಿದೆ. ಆದರೆ ಹಲವೆಡೆ ಪ್ರಯಾಣಿಕರಿಗೆ ಅನೇಕ ರೀತಿಯ ಸಮಸ್ಯೆಗಳು ಎದುರಾಗಿವೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಹೆಣ್ಮಕ್ಕಳಿಗೆ ಭಾರೀ ಲಾಭ ಕೊಟ್ಟಿದೆ. ಆದರೆ ಹಲವೆಡೆ ಪ್ರಯಾಣಿಕರಿಗೆ ಅನೇಕ ರೀತಿಯ ಸಮಸ್ಯೆಗಳು ಎದುರಾಗಿವೆ.
ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಕೆಲವು ಗೊಂದಲಗಳು ಉಂಟಾಗುತ್ತಿವೆ ತಳ್ಳಾಟ, ನೂಕಾಟ ಸೇರದಂತೆ ಜಡೆ ಜಗಳ ಸಹ ನಡೆದಿದೆ. ಕೆಲವು ಭಾಗಗಳಲ್ಲಿ ತಳ್ಳಾಟ, ನೂಕಾಟದಿಂದ ಬಸ್ ಬಾಗಿಲು, ಕಿಟಕಿಯ ಸರಪಳಿ ಕಿತ್ತುಕೊಂಡು ಬಂದಿದೆ. ಅಷ್ಟೇ ಅಲ್ಲಇದೀಗ ಫ್ರೀ ಬಸ್ನಲ್ಲಿ ಸೀಟ್ಗಾಗಿ ಮಾರಾಮಾರಿ ನಡೆದೇ ಬಿಟ್ಟಿದೆ.
ಮಹಿಳೆಯರು ಸೀಟ್ ವಿಚಾರಕ್ಕೆ ಜುಟ್ಟು ಹಿಡಿದು ಬಡಿದಾಡಿಕೊಂಡಿದ್ದಾರೆ. ಜಗಳ ಬಿಡಿಸಲು ಹೋದ ಗಂಡಸರು ಹೈರಾಣಗಿದ್ದಾರೆ. ಮೈಸೂರಿನ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳಾ ಪ್ರಯಾಣಿಕರು ಜುಟ್ಟು ಹಿಡಿದು ಜಗಳವಾಡಿಕೊಳ್ಳಲಾಗಿದೆ. ಫ್ರೀ ಬಸ್ನಲ್ಲಿ ಸೀಟ್ ಸಿಗದೇ ಜಟಾಪಟಿ ಹೆಚ್ಚಾಗುತ್ತಿದೆ. ಲೇಡೀಸ್ ಸೀಟ್ ಫೈಟ್ನ ದೃಶ್ಯ ಭಾರೀ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


