65 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ
ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಮನವಿ ಸಲ್ಲಿಸಿದ್ದರು.
ದೇವಾಲಯಗಳಲ್ಲಿ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದೆ, ಇದರಿಂದ ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿದೆ. ಇವರು ತಮ್ಮ ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ಅನ್ನು ತೋರಿಸಿದರೆ, ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳಾವಕಾಶ ಇದ್ದರೆ ಪ್ರತ್ಯೇಕ ಸ್ಥಳ ಕಾಯ್ದಿರಿಸುವಂತೆಯೂ ಸೂಚಿಸಲಾಗಿದೆ.
ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ದೇವರ ದರ್ಶನದ ವ್ಯವಸ್ಥೆ ಮಾಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಹಿರಿಯ ನಾಗರಿಕರು 202 ಪ್ರವರ್ಗ 'ಎ' ಮತ್ತು 156 ವರ್ಗ 'ಬಿ' ಗೆ ಸೇರಿದ ಮುಜರಾಯಿ ಇಲಾಖೆಯ ಒಟ್ಟು 358 ದೇವಸ್ಥಾನಗಳಲ್ಲಿ ಸರದಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದರ್ಶನ ಪಡೆಯಬಹುದಾಗಿದೆ.
ಇದರಲ್ಲಿ ಬೆಂಗಳೂರಿನ ದೊಡ್ಡ ಗಣಪತಿ, ಬನಶಂಕರಿ ಮತ್ತು ಧರ್ಮರಾಯ ಸ್ವಾಮಿ ದೇವಸ್ಥಾನಗಳು, ದಕ್ಷಿಣ ಕನ್ನಡದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನಗಳು ಸೇರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


