ಕಾಡು ಹಾದಿಯಲ್ಲಿ ನಡೆದು ಹೋಗುತ್ತಿದ್ದಾಗ ಕರಡಿ ದಾಳಿ; ಕಣ್ಣುಗುಡ್ಡೆ ಕಿತ್ತುಬಂದರೂ 2 ಕಿಮೀ ನಡೆದು ಬಂದ ವ್ಯಕ್ತಿ!
ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ. ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರ ಕನ್ನಡ: ಕರಡಿ ದಾಳಿಯಿಂದ 70 ವರ್ಷದ ವ್ಯಕ್ತಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ.
ಮಹಾರಾಷ್ಟ್ರದ ವಿಟ್ಟು ಶೆಳಾಕೆ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಳಾಕೆ ಅವರು ರಾಮನಗರದಿಂದ ತಿಂಬೋಲಿ ಗ್ರಾಮಕ್ಕೆ ಕಾಡಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ವ್ಯಕ್ತಿಯ ಮೇಲೆ ದಾಳಿ ಮಾಡಿದ ಕರಡಿ, ಅವರ ಒಂದು ಕಣ್ಣನ್ನು ಕಿತ್ತುಹಾಕಿದೆ ಮತ್ತು ಇನ್ನೊಂದು ಕಣ್ಣಿಗೂ ಗಾಯ ಉಂಟುಮಾಡಿದೆ. ಆದರೆ, ವೃದ್ಧ ದೃತಿಗೆಡದೆ ಧೈರ್ಯದಿಂದ ಕರಡಿ ವಿರುದ್ಧ ಹೋರಾಡಿ, ಕಿರುಚುತ್ತಾ, ಕೂಗಾಡಿದ್ದಾರೆ. ಇದರಿಂದ ಕರಡಿ ಗಾಬರಿಯಿಂದ ಅಲ್ಲಿಂದ ಕಾಲ್ಕಿತ್ತಿದೆ.
ಕರಡಿ ಅವರನ್ನು ಬಿಟ್ಟು ಕಾಡಿನಲ್ಲಿ ಕಣ್ಮರೆಯಾದ ನಂತರ, ತೀವ್ರ ರಕ್ತಸ್ರಾವವಾಗುತ್ತಿದ್ದರೂ ಕೂಡ ವೃದ್ಧ ಸುಮಾರು ಎರಡು ಕಿ.ಮೀ. ನಡೆದು ಜೀವ ಉಳಿಸಿಕೊಂಡಿದ್ದಾರೆ. ಶಳಾಕೆ ಅವರಿಗೆ ರಾಮನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ.
ರಾಮನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಮಧ್ಯೆ, ಕರಡಿ ದಾಳಿಯು ಆ ಪ್ರದೇಶದ ಜನರಲ್ಲಿ ಭಯ ಮತ್ತು ಆತಂಕವನ್ನು ಉಂಟುಮಾಡಿದೆ. ಕರಡಿ ದಾಳಿಯಿಂದ ಜನರನ್ನು ರಕ್ಷಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅರಣ್ಯಾಧಿಕಾರಿಗಳು ಕೂಡ ಈ ಪ್ರದೇಶದ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


