ವಿಧಾನಸಭೆ ಕಲಾಪದಲ್ಲಿ ಮಾಧ್ಯಮ ನಿರ್ಬಂಧ ಮುಂದುವರಿಕೆ ಸಾಧ್ಯತೆ!
ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ಜಾರಿಯಾಗಿದ್ದ ವಿಧಾನಸಭೆ ಕಲಾಪದ ನಡಾವಳಿಗಳನ್ನು ಮಾಧ್ಯಮಗಳು ವಿಡಿಯೊ ಮತ್ತು ಛಾಯಾ ಚಿತ್ರ ತೆಗೆಯಲು ನಿರ್ಬಂಧ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ಜಾರಿಯಾಗಿದ್ದ ವಿಧಾನಸಭೆ ಕಲಾಪದ ನಡಾವಳಿಗಳನ್ನು ಮಾಧ್ಯಮಗಳು ವಿಡಿಯೊ ಮತ್ತು ಛಾಯಾ ಚಿತ್ರ ತೆಗೆಯಲು ನಿರ್ಬಂಧ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಹಿಂದಿನಸರ್ಕಾರ ಜಾರಿಗೊಳಿಸಿದ್ದ ನಿರ್ಬಂಧವನ್ನು ಕಾಂಗ್ರೆಸ್ ಸರ್ಕಾರ ತೆಗೆಯಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ರಾಜ್ಯಪಾಲರ ಭಾಷಣ ಮತ್ತು ಬಜೆಟ್ ಅಧಿವೇಶನಕ್ಕೆ ತಯಾರಿ ಕುರಿತಂತೆ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಹಿಂದೆ ಯಾವ ನಿಯಮ ಪಾಲಿಸಲಾಗುತ್ತಿತ್ತೋ ಅದನ್ನೇ ಮುಂದುವರಿಸಿಕೊಂಡು ಹೋಗಬೇಕು, ಯಾವುದೇ ಬದಲಾವಣೆ ಬೇಡ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಭೆಯಲ್ಲಿ ಸೂಚಿಸಿದರು ಎಂದು ಮೂಲಗಳು ಹೇಳಿವೆ.
ಹಿಂದಿನ ಸರ್ಕಾರದಲ್ಲಿ ಅಂದಿನ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯೊಳಗೆ ಕಲಾಪದ ನೇರ ಪ್ರಸಾರಕ್ಕೆ ಖಾಸಗಿ ಸುದ್ದಿವಾಹಿನಿಗಳು ಮತ್ತು ಪತ್ರಿಕೆಗಳ ಕ್ಯಾಮೆರಾಗಳಿಗೆ ನಿರ್ಬಂಧ ವಿಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


