ಹಾಸನ: ಅರಕಲಗೂಡಿನ ಎಸ್‌ಬಿಐ ಶಾಖೆಯಲ್ಲಿ ಅಡವಿಟ್ಟಿದ್ದ ಚಿನ್ನ ಕಳ್ಳತನ, ಅಟೆಂಡರ್ ಬಂಧನ!
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿಯ ಎಸ್‌ಬಿಐ ಶಾಖೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಗ್ರಾಹಕರು ಅಡಮಾನವಿಟ್ಟ ₹90 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿರುವ ಆರೋಪ ಕೇಳಿಬಂದಿದೆ.

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿಯ ಎಸ್‌ಬಿಐ ಶಾಖೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಗ್ರಾಹಕರು ಅಡಮಾನವಿಟ್ಟ ₹90 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿರುವ ಆರೋಪ ಕೇಳಿಬಂದಿದೆ.
ಕಳೆದ 10 ವರ್ಷಗಳಿಂದ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಲವ (39) ವಿರುದ್ಧ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಹೊರಗುತ್ತಿಗೆ ಏಜೆನ್ಸಿ ಮೂಲಕ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಆರೋಪಿ ಗ್ರಾಹಕರು ಸಾಲಕ್ಕಾಗಿ ಅಡಮಾನವಿಟ್ಟಿದ್ದ ಚಿನ್ನಾಭರಣಗಳನ್ನು ನಕಲಿ ಚಿನ್ನದಿಂದ ಬದಲಾಯಿಸುತ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ನಡೆದಿದ್ದು, ಅಧಿಕಾರಿಗಳು ಇತ್ತೀಚೆಗೆ ಇದನ್ನು ಗಮನಿಸಿದ್ದಾರೆ.
ಜೂನ್ 14ರಂದು ಹಾಸನದ ಎಸ್‌ಬಿಐ ಸಹಾಯಕ ಪ್ರಧಾನ ವ್ಯವಸ್ಥಾಪಕಿ ಅನುರಾಧಾ ಟಿ. ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಕೊಣನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಡಮಾನವಿಟ್ಟ ಚಿನ್ನಾಭರಣ ತುಂಬಿದ ಪೊಟ್ಟಣಗಳನ್ನು ಸೇಫ್ಟಿ ಲಾಕರ್‌ಗಳಲ್ಲಿ ಇಡುವ ಕೆಲಸವನ್ನು ಆರೋಪಿಗೆ ವಹಿಸಲಾಗಿತ್ತು ಎಂದು ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ವೇಳೆ ಆತ ನಿಜವಾದ ಚಿನ್ನವನ್ನು ಹೊರತೆಗೆದು ನಕಲಿ ಚಿನ್ನವನ್ನು ಅದರಲ್ಲಿ ಹಾಕಿ ಇಡುತ್ತಿದ್ದನು. ಆರೋಪಿಯನ್ನು ಬಂಧಿಸಲಾಗಿದೆ ಎಂದು ಶಂಕರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


