ರಾಜ್ಯ

ಶಕ್ತಿ ಯೋಜನೆ ಎಫೆಕ್ಟ್; ಸಾರಿಗೆ ಬಸ್​ಗಳಲ್ಲಿ ಇಂದು ಒಂದೇ ದಿನ ದಾಖಲೆ 1.05 ಕೋಟಿ ಜನ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಶಕ್ತಿ ಯೋಜನೆ ಎಫೆಕ್ಟ್; ಸಾರಿಗೆ ಬಸ್​ಗಳಲ್ಲಿ ಇಂದು ಒಂದೇ ದಿನ ದಾಖಲೆ 1.05 ಕೋಟಿ ಜನ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಇಂದು ಶಾಂತಿನಗರದಲ್ಲಿರುವ ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ವಿವಿಧ ಸಾರಿಗೆ ಇಲಾಖೆಗಳ ಎಂಡಿಗಳ ಜೊತೆ ರಾಮಲಿಂಗಾ ರೆಡ್ಡಿ ಅವರು ಸಭೆ ನಡೆಸಿದರು. ನಂತರ ಮಾತನಾಡಿದ್ದು ಶಕ್ತಿ ಯೋಜನೆ ಯಶಸ್ವಿಯಾಗಿದೆ. ಶಕ್ತಿ ಯೋಜನೆ ಜಾರಿಗೂ ಮೊದಲು 84.15 ಲಕ್ಷ ಜನರ ಪ್ರಯಾಣ ಮಾಡುತ್ತಿದ್ದರು. ಇಂದು ಒಂದೇ ದಿನ 1.05 ಕೋಟಿ ಮಂದಿ ಪ್ರಯಾಣ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ಈ ಯೋಜನೆಯಿಂದ ಸಾರ್ವಜನಿಕ ಸಾರಿಗೆಗೆ ಬಲ ನೀಡಿದಂತಾಗಿದೆ. ಈ‌ ಯೋಜನೆ ಜಾರಿಗೆ ಮೊದಲು ಸಾರಿಗೆ ಸಂಸ್ಥೆಗಳ‌‌ ಒಟ್ಟು ಪ್ರಯಾಣಿಕರ‌ ಸಂಖ್ಯೆ ಪ್ರತಿದಿನ ಸರಾಸರಿ 84.15 ಲಕ್ಷಗಳಿದ್ದು, ಇಂದು ಸರಾಸರಿ 1 ಕೋಟಿ 5 ಲಕ್ಷಗಳಾಗಿರುವುದು ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂಬುದನ್ನು ತೋರಿಸುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.