ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ಸಾಹಿತಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ
ನಮ್ಮ ಸರ್ಕಾರದಲ್ಲಿ ಯಾರೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾಹಿತಿಗಳಿಗೆ ಭರವಸೆ...

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಯಾರೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾಹಿತಿಗಳಿಗೆ ಭರವಸೆ ನೀಡಿದ್ದಾರೆ.
ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ಸಮಾಜ ನನಗೇನು ನೀಡಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನನ್ನ ಕೊಡುಗೆಯೇನು ಎಂದು ಪ್ರಶ್ನಿಸಿಕೊಳ್ಳಬೇಕು ಎಂದರು.
ಜಾತಿ ವ್ಯವಸ್ಥೆಯಿಂದ ಅನೇಕ ಜನ ಶಿಕ್ಷಣದಿಂದ ವಂಚಿತರಾಗಿದ್ದಾರೆ ಮತ್ತು ಇದು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುತ್ತದೆ ಎಂದು ಸಿಎಂ ಒತ್ತಿ ಹೇಳಿದರು.
ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗಳಿವೆ. ಈ ಅಸಮಾನತೆ ತೊಲಗಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಸಾಧ್ಯ. ಇದು ನಮ್ಮ ಸಂವಿಧಾನದ ಉದ್ದೇಶವಾಗಿದ್ದು, ನಮ್ಮ ಅನೇಕ ಸಾಹಿತಿಗಳು ಇದೇ ಯೋಚನೆಯ ಹಾದಿಯಲ್ಲಿಯೇ ಕೆಲಸ ಮಾಡುತ್ತಿದ್ದಾರೆ ಎಂದರು.
ನಾನು ಸಾಹಿತಿ ಅಲ್ಲದಿದ್ದರೂ ನನಗೆ ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಮಹದೇವ ಸೇರಿದಂತೆ ಹಲವು ಸಾಹಿತಿಗಳ ಒಡನಾಟ ಇತ್ತು ಎಂದು ಮುಖ್ಯಮಂತ್ರಿ ಸ್ಮರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


