ರಾಜ್ಯ

ಮುಂಗಾರು ವಿಳಂಬ: ಮಳೆಗಾಗಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

ಭಾಗಶಃ ಕೈಕೊಟ್ಟ ಮುಂಗಾರು ಮಳೆಯಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಡೆ ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಇದರಂತೆ ಬೆಳಗಾವಿ ಜಿಲ್ಲೆಯ ಈದ್ಗಾ ಮೈದಾನದಲ್ಲಿ ಶನಿವಾರ ಮುಸ್ಲಿಂ ಬಾಂಧವರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಸಿದರು.

ಮುಂಗಾರು ವಿಳಂಬ: ಮಳೆಗಾಗಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಪ್ರಾರ್ಥನೆ ಸಲ್ಲಿಸುತ್ತಿರುವ ಮುಸ್ಲಿಮರು.
Published On :

ಬೆಳಗಾವಿ: ಭಾಗಶಃ ಕೈಕೊಟ್ಟ ಮುಂಗಾರು ಮಳೆಯಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಡೆ ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಇದರಂತೆ ಬೆಳಗಾವಿ ಜಿಲ್ಲೆಯ ಈದ್ಗಾ ಮೈದಾನದಲ್ಲಿ ಶನಿವಾರ ಮುಸ್ಲಿಂ ಬಾಂಧವರು ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಸಿದರು.

ಮುಸ್ಲಿಂ ಧರ್ಮಗುರು ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಏರ್ಪಡಿಸಲಾಗಿತ್ತು. ಪ್ರಾರ್ಥನೆ ವೇಳೆ ಹಲವರು ಕಣ್ಣೀರು ಹಾಕಿದ್ದು ಕಂಡು ಬಂದಿತು.

ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಆಸೀಫ್ ಸೇಠ್ ಅವರು ಮಾತನಾಡಿ, ‘ಸಾಮಾನ್ಯವಾಗಿ ಮೇ ತಿಂಗಳಲ್ಲಿ ಮುಂಗಾರು ಆರಂಭವಾಗುತ್ತದೆ, ಆದರೆ, ಈ ಬಾರಿ ಜೂನ್ ಕೊನೆಯ ವಾರಕ್ಕೆ ಕಾಲಿಟ್ಟರೂ ಮಳೆಯಾಗುತ್ತಿಲ್ಲ. ನಗರಕ್ಕೆ ಕುಡಿಯುವ ನೀರು ಪೂರೈಸುವ ರಾಕಸಕೊಪ್ಪ ಮತ್ತು ಹಿಡಕಲ್ ಜಲಾಶಯಗಳು ಬಹುತೇಕ ಖಾಲಿಯಾಗಿವೆ. ಹೀಗಾಗಿ ಮಳೆಗಾಗಿ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದೇವೆ. ಇಂದು ಮಳೆಯಾಗದಿದ್ದರೆ, ಮುಂದಿನ ಮೂರು ದಿನಗಳವರೆಗೆ ಪ್ರಾರ್ಥನೆ ಮುಂದುವರಿಯುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.