ಶ್ರೀರಂಗಪಟ್ಟಣ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭಾನುವಾರ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.

ಶ್ರೀರಂಗಪಟ್ಟಣ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭಾನುವಾರ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.
ಗುರುವಾರ ಮುಂಜಾನೆ ಮರಳಾಗಾಲ ಗ್ರಾಮದಲ್ಲಿ ವಿರೂಪಾಕ್ಷಪ್ಪ ಎಂಬುವರಿಗೆ ಸೇರಿದ ತೋಟದ ಮನೆಯಲ್ಲಿ ಪತ್ನಿ ಲಕ್ಷ್ಮಿಗೆ ಚೂರಿಯಿಂದ ಇರಿದು, ತನ್ನ ಮಕ್ಕಳಾದ ದರ್ಶನ್ ಮತ್ತು ಅಮೂಲ್ಯ ಅವರ ಕತ್ತು ಸೀಳಿ ಕೊಲೆಗೈದಿದ್ದ ಆರೋಪಿ ಶ್ರೀಕಾಂತ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಲಕ್ಷ್ಮಿ ತಂದೆ ಮೋಹನ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜೂನ್ 24 ರಂದು ಕಲಬುರಗಿ ಜಿಲ್ಲೆಯ ದೇವಲ ಗಾಣಗಾಪುರ ಗ್ರಾಮದಲ್ಲಿ ಹಂತಕನನ್ನು ಬಂಧಿಸಿದ್ದಾರೆ.
ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


