ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯದ ವಿಡಿಯೋ ಸೆರೆ ಹಿಡಿದಿದ್ದ ವಿದ್ಯಾರ್ಥಿ ಬಂಧನ
ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯಕ್ಕೆ ತೆರಳಿದ ಮಹಿಳೆಯ ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಮಹಾದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಶೌಚಾಲಯಕ್ಕೆ ತೆರಳಿದ ಮಹಿಳೆಯ ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಮಹಾದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಹೂಡಿಯ ತಿಗಳರಪಾಳ್ಯದ ನಾಲ್ವರು ಮಹಿಳೆಯರು ಗುರುವಾರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಐಟಿಪಿಎಲ್ ಮುಖ್ಯರಸ್ತೆಯಲ್ಲಿರುವ ತಮ್ಮ ಅಪಾರ್ಟ್‌ಮೆಂಟ್ ಪಕ್ಕದಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಿದ್ಯಾರ್ಥಿ ವಾಸವಿದ್ದು, ವಿದ್ಯಾರ್ಥಿ ಹಾಗೂ ಆತನ ಸ್ವೇಹಿತರು ಶೌಚಾಲಯದಲ್ಲಿದ್ದಾಗ ಫೋಟೋ ಹಾಗೂ ವಿಡಿಯೋಗಳ್ನು ಮಾಡಿದ್ದಾರೆಂದು ಮಹಿಳೆಯರು ದೂರಿನಲಲಿ ಹೇಳಿಕೊಂಡಿದ್ದಾರೆ.
ಅಪಾರ್ಟ್ ಮೆಂಟ್ ಹಾಗೂ ವಸತಿ ಗೃಹದ ನಡುವೆ ಸ್ಥಳವಿದ್ದು, ಈ ಸ್ಥಳದಲ್ಲಿ ನಿಂತು ವಿದ್ಯಾರ್ಥಿಗಳು ಶೌಚಾಲಯದಲ್ಲಿನ ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ.
ಈ ವೇಳೆ ಮಹಿಳೆ ಮೊಬೈಲ್ ಫೋನ್ ನ್ನು ಪರಿಶೀಲನೆ ನಡೆಸಿದ್ದು, ಫೋನ್ ನಲ್ಲಿ ನಗ್ನ ಚಿತ್ರಗಳು ಹಾಗೂ ವಿಡಿಯೋಗಳಿರುವುದು ಕಂಡು ಬಂದಿದೆ.
ದೂರು ನೀಡಿರುವ ನಾಲ್ವರು ಮಹಿಳೆಯರು ಈಶಾನ್ಯ ರಾಜ್ಯಗಳಿಂದ ಬಂದಿದ್ದು, ನಗರದಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಹಾಗೂ ಆತನ ಸ್ನೇಹಿತರು ಕಳೆದ 6 ತಿಂಗಳುಗಳಿಂದ ವಿಡಿಯೋ ಹಾಗೂ ಫೋಟೋಗಳನ್ನು ಸೆರೆ ಹಿಡಿಯುತ್ತಿರುವುದಾಗಿ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಬಂಧಿತ ವಿದ್ಯಾರ್ಥಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದವನಾಗಿದ್ದು. ಆತನ ಫೋನ್ ವಶಕ್ಕೆ ಪಡೆದಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧ ಮಹಿಳೆಯರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇತರ ಆರೋಪಿಗಳಿಗಾಗಿ ಹುಡುಕಾಡ ಆರಂಬಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


