ರಾಜ್ಯ

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದ ಬಿಬಿಎಂಪಿ ಅಧಿಕಾರಿ ವರ್ಗಾವಣೆ ಮಾಡಿ ಸಿಎಂ ಆದೇಶ

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದ ಬಿಬಿಎಂಪಿಯ ಮಳೆನೀರು ಚರಂಡಿ (ಎಸ್‌ಡಬ್ಲ್ಯುಡಿ) ವಿಭಾಗದ ಮುಖ್ಯ ಎಂಜಿನಿಯರ್ ಬಸವರಾಜ್ ಆರ್ ಕಬಾಡೆ ಅವರನ್ನು ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದ ಬಿಬಿಎಂಪಿ ಅಧಿಕಾರಿ ವರ್ಗಾವಣೆ ಮಾಡಿ ಸಿಎಂ ಆದೇಶ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದ ಬಿಬಿಎಂಪಿಯ ಮಳೆನೀರು ಚರಂಡಿ (ಎಸ್‌ಡಬ್ಲ್ಯುಡಿ) ವಿಭಾಗದ ಮುಖ್ಯ ಎಂಜಿನಿಯರ್ ಬಸವರಾಜ್ ಆರ್ ಕಬಾಡೆ ಅವರನ್ನು ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಗೆ (ಯುಡಿಡಿ) ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದಿರುವ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.

ಮಳೆನೀರು ಚರಂಡಿ ವಿಭಾಗದ ಮುಖ್ಯಸ್ಥರಾಗಿ ಚರಂಡಿಗಳ ಮರು-ಮಾದರಿ ಮತ್ತು ಡಿ-ಸಿಲ್ಟಿಂಗ್‌ಗೆ ಸಂಬಂಧಿಸಿದ 5,000-ಕೋಟಿ ಮೌಲ್ಯದ ಯೋಜನೆಗಳ ನಿರ್ವಹಣೆಯ ಉಸ್ತುವಾರಿಯನ್ನು ಕಬಾಡೆ ಅವರು ವಹಿಸಿಕೊಂಡಿದ್ದರು. ಇದಲ್ಲದೆ, ಮುಖ್ಯ ಜನರಲ್ ಮ್ಯಾನೇಜರ್ (CGM) ಹುದ್ದೆಯನ್ನು ಕೂಡ ನಿಭಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.