ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳಿಗೆ (Shakti smart cards) ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ.
ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.
ಶೀಘ್ರ ಹೊಸ ಪೋರ್ಟಲ್
ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು. ಸರ್ಕಾರದ ಈ ಶಕ್ತಿ ಯೋಜನೆಯು ರಸ್ತೆ ಸಾರಿಗೆ ನಿಗಮಗಳಿಗೆ (ಆರ್‌ಟಿಸಿ) ಹೆಚ್ಚಿನ ಅಧಿಕಾರ ನೀಡಿದೆ. ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ ಎಂದರು.
ಬಿಜೆಪಿ ಬಲ ಕುಗ್ಗಿಸಿದ 'ಶಕ್ತಿ'
ಇದೇ ವೇಳೆ ಬಿಜೆಪಿ ವಿರುದ್ಧ ಟೀಕೆ ಮಾಡಿದ ಸಚಿವರು, ಶಕ್ತಿ ಯೋಜನೆಯಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಇದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಶಕ್ತಿಹೀನಗೊಳಿಸಿದೆ. ಯಾಕೆಂದರೆ ಅವರು (ಬಿಜೆಪಿಯವರು) ಮಹಿಳೆಯರನ್ನು ಬೆಂಬಲಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


