ಹಣದ ನೆರವಿನ ನಿರೀಕ್ಷೆಯಲ್ಲಿದ್ದ ಬಡ ಮಹಿಳೆಗೆ ತಾನೇ ಉಚಿತ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ!
ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ ಅವರು ಹಣದ ನೆರವಿನ ನಿರೀಕ್ಷೆಯಲ್ಲಿದ್ದ ನಿರ್ಗತಿಕ ಮಹಿಳೆಗೆ ಉಚಿತವಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವರ ನಡೆಯು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ತುಮಕೂರು: ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ ಅವರು ಹಣದ ನೆರವಿನ ನಿರೀಕ್ಷೆಯಲ್ಲಿದ್ದ ನಿರ್ಗತಿಕ ಮಹಿಳೆಗೆ ಉಚಿತವಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವರ ನಡೆಯು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಕುಣಿಗಲ್ ತಾಲೂಕಿನ ಕುಂದೂರು ನಿವಾಸಿ ಆಶಾ ಹತ್ತು ವರ್ಷಗಳ ಹಿಂದೆ ಮೊಣಕಾಲಿನ ಕೀಲು ಸ್ಥಾನಪಲ್ಲಟಕ್ಕೆ ಒಳಗಾಗಿದ್ದರು. ನಂತರ, ಯಶಸ್ವಿನಿ ಯೋಜನೆಯಡಿ ಶಸ್ತ್ರಚಿಕಿತ್ಸೆ ನಡೆಸಿ ಮೊಣಕಾಲು ಸಮಸ್ಯೆಯನ್ನು ನಿವಾರಿಸಲಾಗಿತ್ತು. ಆದರೆ, ಮತ್ತೆ ಆಕೆಯ ಮೊಣಕಾಲಿನ ಕೀಲು ಸ್ಥಾನಪಲ್ಲಟಗೊಂಡಿತು.
ಬಡತನದ ಹಿನ್ನೆಲೆಯಿಂದ ಬಂದಿರುವ ಆಶಾ ಅವರಿಗೆ ಯೋಜನೆಯ ಅಡಿಯಲ್ಲಿ ಅದೇ ಶಸ್ತ್ರಚಿಕಿತ್ಸೆಯನ್ನು ಮತ್ತೆ ನಡೆಸಲಾಗುವುದಿಲ್ಲ ಮತ್ತು ವಿಮಾ ರಕ್ಷಣೆಯನ್ನು ನೀಡಲಾಗುವುದಿಲ್ಲ ಎಂದು ತಿಳಿಸಲಾಯಿತು. ಖಾಸಗಿ ಆಸ್ಪತ್ರೆಗಳು ಆಪರೇಷನ್‌ಗೆ 4 ರಿಂದ 5 ಲಕ್ಷ ರೂಪಾಯಿ ವೆಚ್ಛವಾಗುವುದಾಗಿ ಹೇಳಿದ್ದು, ಆಕೆಯ ಕುಟುಂಬಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಲು ಸಾಧ್ಯವಾಗಲಿಲ್ಲ.
ಈವೇಳೆ ಸ್ಥಳೀಯ ಶಾಸಕ ಡಾ. ರಂಗನಾಥ್ ಅವರನ್ನು ಭೇಟಿ ಮಾಡಿ ತಮ್ಮ ಕಷ್ಟಗಳನ್ನು ಹಂಚಿಕೊಂಡಿದ್ದಾರೆ. ಆಕೆಯ ಮಾತನ್ನು ಕೇಳಿದ ಡಾ. ರಂಗನಾಥ್ ಸಹಾಯದ ಭರವಸೆ ನೀಡಿದರು.
ಶಾಸಕರಾಗುವ ಮುನ್ನವೇ ತಮ್ಮ ಸೇವೆಗೆ ಹೆಸರಾಗಿದ್ದ ಮೂಳೆ ಶಸ್ತ್ರ ಚಿಕಿತ್ಸಕರೂ ಆಗಿರುವ ಶಾಸಕ ರಂಗನಾಥ್ ಅವರು ಆಕೆಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ, ತಾವೇ ಸ್ವತಃ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಗೆ ಪರಿಹಾರ ನೀಡಿದ್ದಾರೆ.
ಶಾಸಕರ ಈ ನಡೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಹಲವಾರು ಜನರ ಹೃದಯಗಳನ್ನು ಗೆದ್ದಿದೆ. ಅವರ ಈ ನಡೆಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಮಾನವೀಯ ಕಾರ್ಯಗಳು ರಾಜಕಾರಣಿಗಳ ಬಗೆಗಿನ ಗ್ರಹಿಕೆಯನ್ನು ಬದಲಾಯಿಸಲು ಸಹಕಾರಿಯಾಗಲಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


