ಬೆಂಗಳೂರು: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ
ಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಬೆಂಗಳೂರು: ಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
ಭಾನುವಾರ ಊಟಿಯಲ್ಲಿ ತಂಗಿದ್ದ ಇವರು ತಡರಾತ್ರಿ ವಾಂತಿ-ತಲೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಅವಧಾನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನುಅವರ ಪಾರ್ಥಿವ ಶರೀರವನ್ನು ಊಟಿಯಿಂದ ಬೆಂಗಳೂರಿಗೆ ತರಲಾಗಿದೆ.
‘ಅರುಣ್ ಅವರಿಗೆ ಇಬ್ಬರು ಸಹೋದರಿಯರಿದ್ದು ಒಬ್ಬರು ಅಮೆರಿಕ ಮತ್ತೊಬ್ಬರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಂಗಳವಾರ) ಸಂಜೆ ಅಥವಾ ನಾಡಿದ್ದು (ಬುಧವಾರ) ನಡೆಯಲಿದೆ. ಅಲ್ಲಿಯವರೆಗೂ ಪಾರ್ಥಿವ ಶರೀರವನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಇರಿಸಲಾಗುವುದು‘ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


