ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಹೆಚ್ಚಳ: ಕರ್ನಾಟಕ ಎಎಪಿಯಿಂದ 'ರೋಡ್ ಟು ಡೆತ್' ಅಭಿಯಾನ
ಯೋಜನೆಯ ಅವೈಜ್ಞಾನಿಕ ಅನುಷ್ಠಾನದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾವುಗಳನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕರ್ನಾಟಕ ಘಟಕವು ‘ರೋಡ್ ಟು ಡೆತ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

ಬೆಂಗಳೂರು: ಯೋಜನೆಯ ಅವೈಜ್ಞಾನಿಕ ಅನುಷ್ಠಾನದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾವುಗಳನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಕರ್ನಾಟಕ ಘಟಕವು ‘ರೋಡ್ ಟು ಡೆತ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ.
ಕಳೆದ 9 ತಿಂಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 158 ಜನರು ಸಾವಿಗೀಡಾಗಿದ್ದಾರೆ. ಸರ್ಕಾರಗಳ ಅವೈಜ್ಞಾನಿಕ ಮತ್ತು ಭ್ರಷ್ಟ ಯೋಜನೆಗಳಿಗೆ ಅಮಾಯಕರು ಬಲಿಯಾಗುತ್ತಿರುವುದು ದುರಂತ ಎಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ.
ಸರ್ಕಾರಗಳ ತಪ್ಪು ಕ್ರಮಗಳಿಂದ ಅಮಾಯಕರು ಸಾವಿಗೀಡಾಗುತ್ತಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷವು ‘ರೋಡ್ ಟು ಡೆತ್’ ಅಭಿಯಾನವನ್ನು ಕೈಗೆತ್ತಿಕೊಂಡಿದೆ ಎಂದರು.
ಈ ಅಭಿಯಾನದ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸಲು ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಶುಕ್ರವಾರ (ಜೂನ್ 30) ಮೈಸೂರು ರಸ್ತೆಯ ಕಣಿಮಾನಿಕೆ ಟೋಲ್ ಪ್ಲಾಜಾ ಬಳಿ ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಮೋಹನ್ ದಾಸರಿ ತಿಳಿಸಿದರು.
ಇಂತಹ ಅಭಿಯಾನಗಳ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸುವುದು ಆಮ್ ಆದ್ಮಿ ಪಕ್ಷದ ಉದ್ದೇಶವಾಗಿದ್ದು, ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


