ರಾಜ್ಯ

ಹಾಸನದಲ್ಲಿ ಭೂಕಂಪದ ಅನುಭವ: ಜನರಲ್ಲಿ ಆತಂಕ

ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದರಿಂದ ಗಾಬರಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದ ಘಟನೆ ವರದಿಯಾಗಿದೆ.

ಹಾಸನದಲ್ಲಿ ಭೂಕಂಪದ ಅನುಭವ: ಜನರಲ್ಲಿ ಆತಂಕ
ಸಂಗ್ರಹ ಚಿತ್ರ
Published On :

ಹಾಸನ: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದರಿಂದ ಗಾಬರಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದ ಘಟನೆ ವರದಿಯಾಗಿದೆ.

ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಅಲ್ಲದೇ, ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ಓಡಿ ಬಂದಿದ್ದಾರೆ. ಭೂಮಿ ಕಂಪಿಸಿದ್ದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

ಈ ನಡುವೆ ಯಾವ ಕಾರಣಕ್ಕೆ ಭೂಮಿ ಕಂಪಿಸಿದೆ ಎಂದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಶಾಸಕ ಎ. ಮಂಜು ಸೂಚನೆ ನೀಡಿದ್ದಾರೆ.

ಸೂಚನೆ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.