ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಿಗೆ ಕಾಣಿಕೆ ನೀಡಲು 'ಇ-ಹುಂಡಿ' ಆ್ಯಪ್: ಸಚಿವ ಜಮೀರ್ ಅಹ್ಮದ್ ಚಾಲನೆ
ಮುಸ್ಲಿಮರ ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.

ಬೆಂಗಳೂರು: ಮುಸ್ಲಿಮರ ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಬೋರ್ಡ್ ಸಭೆ ಯಲ್ಲಿ ನೂತನ ಆಪ್ಗೆ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅವರು ಚಾಲನೆ ನೀಡಿದರು.
ದರ್ಗಾ ಹಾಗೂ ಮಸೀದಿಗಳಿಗೆ ಸಮುದಾಯ ನೀಡುವ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಆಗದಂತೆ ಜತೆಗೆ ನಿಗದಿತ ಉದ್ದೇಶಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಲು ಆಪ್ ಸಿದ್ದಪಡಿಸಲಾಗಿದೆ. ಮೊದಲಿಗೆ ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾ ದಲ್ಲಿ ಈ ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ವಖ್ಫ್ ವ್ಯಾಪ್ತಿಗೆ ಬರುವ 3131 ದರ್ಗಾ, 10,398 ಮಸೀದಿಗಳಲ್ಲೂ ಜಾರಿಗೊಳಿಸಲಾಗುವುದು. ಸಮುದಾಯ ಎಲ್ಲಿಂದ ಯಾವುದೇ ಸಮಯದಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡಬಹುದಾಗಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ವಕ್ಫ್ ಬೋರ್ಡ್ ಆಸ್ತಿಗಳ ಭಾರೀ ಒತ್ತುವರಿ ಕುರಿತು, ಅಕ್ರಮ ಒತ್ತುವರಿ ತೆರವು ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ಹೇಳಿದರು. ಹಲವು ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಕೆಲವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಜತೆ ಚರ್ಚೆ ನಡೆಸಲಾಗುವುದು. ಬಜೆಟ್ ನಂತರ ವಕ್ಫ್ ಆಸ್ತಿ ಅದಾಲತ್ ನಡೆಯಲಿದೆ ಎಂದರು.
ವಖ್ಫ್ ಆಸ್ತಿಗಳನ್ನು ಕೆಲವು ಸರ್ಕಾರಿ ಇಲಾಖೆ ಗಳೂ ಒತ್ತುವರಿ ಮಾಡಿದ್ದು ಆ ಬಗ್ಗೆ ಗಮನಹರಿಸಿ ತೆರವು ಮಾಡಲಾಗುವುದು. ಖಾಸಗಿಯವರ ಒತ್ತುವರಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಒಟ್ಟು ಆಸ್ತಿ ಒತ್ತುವರಿ ಆಗಿದೆ ಸರ್ಕಾರಿ ಮತ್ತು ಖಾಸಗಿ ಸೇರಿ ಎಂಬುದರ ಬಗ್ಗೆ ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣ ಗಳ ಬಗ್ಗೆ ಪಟ್ಟಿ ಮಾಡಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಂಡ್ಸರ್ ಮ್ಯಾನರ್ ಹೋಟೆಲ್ ಜಾಗ ಕ್ಕೆ ಕಡಿಮೆ ಬಾಡಿಗೆ ನಿಗದಿ ಆಗಿದ್ದು, ಮಾರುಕಟ್ಟೆ ದರದ ಪ್ರಕಾರ 2 ಕೋಟಿ ರೂ. ವರೆಗೂ ಬರಬೇಕಿದೆ. ಈ ಬಗ್ಗೆ ನ್ಯಾಯ ಲಯದಲ್ಲಿ ಹೋರಾಟ ನಡೆಸಬೇಕಿದೆ ಎಂದು ಬೋರ್ಡ್ ಸದಸ್ಯರು ಪ್ರಸ್ತಾಪ ಮಾಡಿದರು. ಈ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು.
ವಕ್ಪ್ ಬೋರ್ಡ್ ನಲ್ಲಿ 45 ಕೋಟಿ ರೂ. ಅನುದಾನ ಲಭ್ಯವಿದ್ದು, ಅದನ್ನು ಶಾಲಾ ಕಾಲೇಜು ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಲು ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸಚಿವರು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


