ರಾಜ್ಯ

ನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ನಾಳೆ 2021ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ವೆಬ್ ಸೈಟ್ http://karresults.nic.in ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಾಳೆ 2021ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ವೆಬ್ ಸೈಟ್ http://karresults.nic.in ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಜೂನ್ 12 ರಿಂದ 19ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆದಿತ್ತು. ಇದೀಗ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in  ಫಲಿತಾಂಶ ಬಿಡುಗಡೆಯಾಗಲಿದೆ. 

ಮೇ ನಲ್ಲಿ ಪ್ರಕಟವಾಗಿದ್ದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು  7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶವನ್ನು ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.