ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ: ಇಬ್ಬರು ಸವಾರರ ದುರ್ಮರಣ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ: ಇಬ್ಬರು ಸವಾರರ ದುರ್ಮರಣ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ
Published On :

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು ಮೃತರನ್ನು 65 ವರ್ಷದ ಸನಾವುಲ್ಲಾ ಬೇಗಂ ಮತ್ತು 60 ವರ್ಷದ ನೂರ್ ಜಹಾನ್ ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ಬಾಪೂಜಿ ನಗರದ ನಿವಾಸಿಗಳಾಗಿದ್ದು ಕಾರ್ಯಕ್ರಮ ನಿಮಿತ್ತ ರಾಮನಗರಕ್ಕೆ ಬಂದಿದ್ದರು.

ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದಾಗ ಕೆಟ್ಟು ನಿಂತಿದ್ದ ಲಾರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಅಪಘಾತ ಸ್ಥಳಕ್ಕೆ‌ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಜರಾಜೇಶ್ವರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.