ಮೈಸೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ 30 ವರ್ಷದ ಕಾಡಾನೆ ಸಾವು
ಹುಣಸೂರು ತಾಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮೈಸೂರು-ಮಾನಂದವಾಡಿ ರಸ್ತೆಯ ಡಿಬಿ ಕುಪ್ಪೆ ಗ್ರಾಮದ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 30 ವರ್ಷದ ಗಂಡಾನೆ ಸಾವಿಗೀಡಾಗಿದೆ.

ಮೈಸೂರು: ಹುಣಸೂರು ತಾಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮೈಸೂರು-ಮಾನಂದವಾಡಿ ರಸ್ತೆಯ ಡಿಬಿ ಕುಪ್ಪೆ ಗ್ರಾಮದ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 30 ವರ್ಷದ ಗಂಡಾನೆ ಸಾವಿಗೀಡಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಮೈಸೂರು-ಮಾನಂದವಾಡಿ ರಸ್ತೆಯ ಡಿಬಿ ಕುಪ್ಪೆ ಗ್ರಾಮದ ಕೃಷಿ ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 30 ವರ್ಷದ ಗಂಡಾನೆನೆ ಸಾವಿಗೀಡಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಕುಮಾರ ಚಿಕ್ಕನರಗುಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸೆಸ್ಕ್ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಪಶುವೈದ್ಯರ ಪ್ರಕಾರ, ಆನೆಯು ಸುಮಾರು 30 ರಿಂದ 35 ವರ್ಷ ಪ್ರಾಯದ್ದಾಗಿದ್ದು, ಡಿಬಿ ಕುಪ್ಪೆ ಗ್ರಾಮದ ಉದಯ್ ಅಲಿಯಾಸ್ ಥಾಮಸ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿದೆ. ನಿಯಮ ಉಲ್ಲಂಘಿಸಿ ತಮ್ಮ ಮನೆಯಿಂದ ಸೋಲಾರ್ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಆರೋಪಿ ಥಾಮಸ್ ತಲೆಮರೆಸಿಕೊಂಡಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಉಲ್ಲಂಘನೆಯಡಿ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ರಮ ವಿದ್ಯುತ್ ಸರಬರಾಜಿನ ಬಗ್ಗೆ ತನಿಖೆ ನಡೆಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


