ರಾಜ್ಯ

ಹಾಸನ: ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ

ಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ.

ಹಾಸನ: ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ
ಸಂಗ್ರಹ ಚಿತ್ರ
Published On :

ಹಾಸನ: ಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ. 

ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ಅಪಘಾತ ಸಂಭವಿಸಿದ್ದು ಚಿಕ್ಕಗಂಡಸಿ ಗ್ರಾಮದ 45 ವರ್ಷದ ರಮೇಶ್ ಎಂಬುವರು ಮೃತಪಟ್ಟಿದ್ದಾರೆ. ಆರಗ ಜ್ಞಾನೇಂದ್ರ ಅವರು ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಪೊಲೀಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿತ್ತು.

ಅಪಘಾತ ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.