ರಾಜ್ಯ

ಶಿವಮೊಗ್ಗದಲ್ಲಿ ದೇಶದ 2ನೇ ರಕ್ಷಣಾ ವಿಶ್ವವಿದ್ಯಾಲಯ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಭಾರತದ ಎರಡನೇ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪನೆಗೊಳ್ಳಳಿದ್ದು, 2023ರ ಜೂನ್‌ನಿಂದ ಪ್ರಾರಂಭವಾಗುವ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದರು.

ಶಿವಮೊಗ್ಗದಲ್ಲಿ ದೇಶದ 2ನೇ ರಕ್ಷಣಾ ವಿಶ್ವವಿದ್ಯಾಲಯ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Published On :

ಶಿವಮೊಗ್ಗ: ಭಾರತದ ಎರಡನೇ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪನೆಗೊಳ್ಳಳಿದ್ದು, 2023ರ ಜೂನ್‌ನಿಂದ ಪ್ರಾರಂಭವಾಗುವ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಮದಾಬಾದ್‌ನ ರಕ್ಷಣಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕಕ್ಕೆ ರಕ್ಷಾ ವಿವಿಯೊಂದನ್ನು ತರುವ ಬಗ್ಗೆ ಚರ್ಚಿಸಲಾಗಿತ್ತು. ಅದರ ಪರಿಣಾಮ ರಾಜ್ಯಕ್ಕೆ ಈ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಅದಕ್ಕಾಗಿ ನವುಲೆ ಸರ್ವೇ ನಂ.12ರಲ್ಲಿ 8 ಎಕರೆ ಭೂಮಿಯನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ವಿವಿ ಆರಂಭವಾಗಲಿದೆ. ಜಿಲ್ಲೆಯ ಯುವಕರಿಗೆ ಹೊಸ ದಿಕ್ಕನ್ನು ತೋರಿಸುತ್ತದೆ. ಉದ್ಯೋಗ ನೀಡುವಲ್ಲಿ ಸಹಕರಿಸುತ್ತದೆ ಎಂದು ಹೇಳಿದರು.

ಇಡೀ ದೇಶದಲ್ಲೇ ಎರಡನೇ ರಕ್ಷಣಾ ವಿಶ್ವವಿದ್ಯಾಲಯ ಇದಾಗಿದ್ದು, ಭದ್ರತಾ ವಿಷಯಕ್ಕೆ ಸಂಬಂಧಿಸಿ ಕೋರ್ಸುಗಳ ಡಿಪ್ಲೊಮೋ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು. ಡಿಪ್ಲೊಮೋ ಇನ್ ಪೊಲೀಸ್ ಸೈನ್ಸ್, ಬೇಸಿಕ್ ಕೋರ್ಸ್ ಇನ್ ಕಾರ್ಪೋರೇಟ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ಡಿಪ್ಲೊಮೋ ಇನ ಕ್ರಿಮಿನಲ್ ಇನ್ವೆಸ್ಟಿಗೇಶನ್, ಪಿಜಿ ಡಿಪ್ಲೊಮೋ ಇನ್ ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಲಾ, ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್‌ಮೆಂಟ್, ದೈಹಿಕ ಸಾಮರ್ಥ್ಯ ನಿರ್ವಹಣೆಯ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಪಿಜಿ ಡಿಪ್ಲೊಮೋ ಇನ್ ಕೋಸ್ಟಲ್ ಸೆಕ್ಯೂರಿಟಿ ಅಂಡ್ ಎಎಂಪಿ ಲಾ ಎನ್ಫೋರ್ಸ್ಮೆಂಟ್ ಕೋರ್ಸ್ಗಳ ಬೋಧನೆ ಮಾಡಲಾಗುವುದು ಎಂದು ತಿಳಿಸಿದರು.

ಇದರಿಂದ ಪೊಲೀಸ್ ಮತ್ತು ರಕ್ಷಣಾ ವಿಭಾಗಗಳಿಗೆ ನೇರವಾಗಿ ಅಭ್ಯರ್ಥಿಗಳು ಆಯ್ಕೆಯಾಗಬಹುದಾಗಿದ್ದು, ಇದೊಂದು ವೃತ್ತಿ ಭದ್ರತೆಯ ಶಿಕ್ಷಣವಾಗಿದೆ, ಜಿಲ್ಲೆಯ ವಿದ್ಯಾರ್ಥಿಗಳಿಗೆ ಇದು ವರದಾನವಾಗಲಿದೆ, ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೆ ವಿಶ್ವವಿದ್ಯಾನಿಲಯವು ರಾಗಿಗುಡ್ಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.