ಸಾಲದ ಆ್ಯಪ್ ಕಂಪನಿಗಳ ಮೇಲಿನ ಇಡಿ ತನಿಖೆ ಸ್ಥಗಿತಗೊಳಿಸಲಾಗದು: ಹೈಕೋರ್ಟ್
ಚೀನಾದ ಸಂಸ್ಥೆಗಳು ನಡೆಸುತ್ತಿರುವ ಮೊಬೈಲ್ ಲೋನ್ ಆ್ಯಪ್‌ಗಳ ಕಿರುಕುಳ ತಾಳಲಾರದೆ ಹಲವಾರು ಜನರು ಆತ್ಮಹತ್ಯೆಗೆ ಶರಣಾಗಿದ್ದು, ಜನರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಕೇರಳ ಮೂಲದ ಇಂಡಿಟ್ರೇಡ್ ಫಿನ್‌ಕಾರ್ಪ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ತಿರಸ್ಕರಿಸಿದೆ.

ಬೆಂಗಳೂರು: ಚೀನಾದ ಸಂಸ್ಥೆಗಳು ನಡೆಸುತ್ತಿರುವ ಮೊಬೈಲ್ ಲೋನ್ ಆ್ಯಪ್‌ಗಳ ಕಿರುಕುಳ ತಾಳಲಾರದೆ ಹಲವಾರು ಜನರು ಆತ್ಮಹತ್ಯೆಗೆ ಶರಣಾಗಿದ್ದು, ಜನರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಕೇರಳ ಮೂಲದ ಇಂಡಿಟ್ರೇಡ್ ಫಿನ್‌ಕಾರ್ಪ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ತಿರಸ್ಕರಿಸಿದೆ.
ಸಣ್ಣ ಮೊತ್ತದ ಸಾಲ ನೀಡಿ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಇಂಡಿಟ್ರೇಡ್ ಫಿನ್‌ಕಾರ್ಪ್ ಮೇಲಿದೆ. ಜತೆಗೆ, ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದುದು, ಚೀನಾ ನಂಟಿನ ಆರೋಪವನ್ನೂ ಎದುರಿಸುತ್ತಿದೆ.
ಈ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಕಂಪನಿಯ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಿತ್ತು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ ಮೊರೆ ಹೋಗಿತ್ತು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸಾಲದ ಆ್ಯಪ್ ಕಂಪನಿಗಳ ಮೇಲಿನ ಇಡಿ ತನಿಖೆ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಹೇಳಿದೆ.
ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ವಿದೇಶಿ ಕೈವಾಡದಿಂದ ಸಂಚು ಹೂಡಿರುವ ಆರೋಪವೂ ಕಂಪನಿ ಮೇಲಿದೆ. ರಾಷ್ಟ್ರದ ಆರ್ಥಿಕ ಭದ್ರತೆ, ನಾಗರಿಕರ ಹಿತಾಸಕ್ತಿ ರಕ್ಷಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಮುಂದುವರಿಯುವ ಅಗತ್ಯವಿದೆ ಎಂದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


