ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ: ಈ ರಸ್ತೆಗಳಲ್ಲಿ ಸಂಜೆ ಹೊತ್ತು ಸಂಚಾರ ತಪ್ಪಿಸಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಶುಕ್ರವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ದೇವನಹಳ್ಳಿಯ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಶುಕ್ರವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ದೇವನಹಳ್ಳಿಯ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಅವರ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಇಂದು ಸಂಜೆ ಸಂಚಾರ ದಟ್ಟಣೆ ಉಂಟಾಗಲಿದ್ದು, ಈ ಕೆಳಗಿನ ರಸ್ತೆಗಳಲ್ಲಿ ಸಾರ್ವಜನಿಕರು ಅಪರಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಂಚಾರವನ್ನು ತಪ್ಪಿಸುವಂತೆ ಸಂಚಾರಿ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಆ ರಸ್ತೆಗಳು ಯಾವುವೆಂದರೆ: ದೇವನಹಳ್ಳಿ ಹೆದ್ದಾರಿ, ಬಳ್ಳಾರಿ ರಸ್ತೆ, ಹೆಬ್ಬಾಳ ಜಂಕ್ಷನ್, ಮೇಕ್ರಿ ವೃತ್ತ, ಕಾವೇರಿ ಥಿಯೇಟರ್ ಜಂಕ್ಷನ್, ರಮಣ ಮಹರ್ಷಿ ರಸ್ತೆ, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಅಂಬೇಡ್ಕರ್ ವೀಧಿ, ಕೆಆರ್ ವೃತ್ತ, ಹಡ್ಸನ್ ವೃತ್ತ, ಎನ್‌ಆರ್ ಜೆ. ಕಾರ್ಯ, ಟೌನ್ ಹಾಲ್ ಜಂಕ್ಷನ್, ತಿಮ್ಮಯ್ಯ ಜಂಕ್ಷನ್, ಓಲ್ಡ್ ಏರ್‌ಪೋರ್ಟ್ ರಸ್ತೆ, ಎಎಸ್‌ಸಿ ಸೆಂಟರ್, ಇಸ್ರೋ ಜಂಕ್ಷನ್ ಮತ್ತು ಎಸ್‌ಡಿ ರಸ್ತೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


