ರಾಜ್ಯ

ಪುತ್ರನ 'ಲಂಚಾವತಾರ' ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.

ಪುತ್ರನ 'ಲಂಚಾವತಾರ' ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಮಾಡಾಳ್ ಪ್ರಶಾಂತ್(ಸಂಗ್ರಹ ಚಿತ್ರ)
Published On :

ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.

ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ ನ್ಯಾಯಾಂಗ ಬಂಧನವಾಗಿದೆ.

ಅವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಸಿಬ್ಬಂದಿ ರಾತ್ರಿಯಿಂದ ಇಂದು ಬೆಳಗಿನವರೆಗೆ ನಡೆಸಿದ ಸತತ ಕಾರ್ಯಾಚರಣೆ ಮತ್ತು ಶೋಧ ವೇಳೆ 6 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

Story image

ಲೋಕಾಯುಕ್ತ ದಾಳಿ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕೆ ಇಂದು ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ಸಂಸ್ಥೆಯನ್ನು ಬಿಜೆಪಿ ಸರ್ಕಾರವೇ ಮರುಸ್ಥಾಪಿಸಿದ್ದು ಭ್ರಷ್ಟಾಚಾರ ನಿಗ್ರಹಕ್ಕೆ. ಸಮಗ್ರ ತನಿಖೆಯಾಗಿ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆಯಾಗುತ್ತದೆ ಎಂದಿದ್ದರು.

ಇದಾದ ಬಳಿಕ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪಕ್ಷಕ್ಕೆ ಮುಜುಗರವಾಗಬಾರದು ಮತ್ತು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಬಾರದು ಎಂಬ ಉದ್ದೇಶದಿಂದ ಸಿಎಂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(KSDL) ಅಧ್ಯಕ್ಷ ಸ್ಥಾನಕ್ಕೆ ಇಂದು ಸಾಯಂಕಾಲದೊಳಗೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೂಚಿಸಿದ್ದರು.

ಮುಖ್ಯಮಂತ್ರಿಗಳಿಂದ ಸೂಚನೆ ಬಂದ ಕೂಡಲೇ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ, ನನ್ನ ಮತ್ತು ನನ್ನ ಕುಟುಂಬದ ವಿರುದ್ದ ಚುನಾವಣೆ ಹೊತ್ತಿನಲ್ಲಿ ಷಡ್ಯಂತ್ರ ನಡೆಸಲಾಗಿದ್ದು, ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.