ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕರಾವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ತಾಳೆ ಎಣ್ಣೆ ಸಂಸ್ಕರಣಾ ಘಟಕ ತೆರೆಯಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಲಬುರಗಿ: ಕರಾವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ತಾಳೆ ಎಣ್ಣೆ ಸಂಸ್ಕರಣಾ ಘಟಕ ತೆರೆಯಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಲಬುರಗಿ ನಗರದಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಸ್ತುತ ದೇಶದ ಒಟ್ಟು ಬೇಡಿಕೆಯ ಶೇ 70ರಷ್ಟು ಬೇಳೆ ಕಾಳು ಹಾಗೂ ಎಣ್ಣೆಕಾಳುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಅಂತೆಯೇ, 'ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಎಣ್ಣೆ ಬೀಜಗಳನ್ನು ಒದಗಿಸಲಾಗುತ್ತದೆ. ರೈತ ಉತ್ಪಾದಕ ಸಂಘ (ಎಫ್ ಪಿಒ)ಗಳನ್ನು ನೋಂದಣಿ ಮಾಡಿಕೊಂಡವರಿಗೆ ಸಂಸ್ಕರಣಾ ಘಟಕ, ಕಚೇರಿ ಸ್ಥಾಪಿಸಲು 18ರಿಂದ 20 ಲಕ್ಷ ರೂ ಸಾಲ ಸೌಲಭ್ಯ ನೀಡಲಾಗುವುದು. ಉಕ್ರೇನ್ ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಅಲ್ಲಿಂದ ಬರಬೇಕಿದ್ದ ಎಣ್ಣೆ ಪದಾರ್ಥಗಳು ಬರುತ್ತಿಲ್ಲ. ಖಾದ್ಯ ತೈಲ ಉತ್ಪಾದನೆಯಲ್ಲಿ ಆತ್ಮ ನಿರ್ಭರ (ಸ್ವಾವಲಂಬನೆ)ವಾಗಲು ಎಣ್ಣೆ ಬೀಜಗಳ ಕಿಟ್ ನೀಡಲಾಗುತ್ತಿದೆ' ಎಂದರು.
ಬೆಳೆ ಪ್ರಮಾಣ ಕುಸಿತ
ರಾಜ್ಯದಲ್ಲಿ ಮೊದಲು 13 ಲಕ್ಷ ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ, ಕುಸುಬೆ, ಸಾಸಿವೆಯಂತಹ ಎಣ್ಣೆ ಕಾಳುಗಳನ್ನು ಬೆಳೆಯುತ್ತಿದ್ದರು. ಈಗ ಆ ಪ್ರಮಾಣ 3 ಲಕ್ಷ ಎಕರೆಗೆ ಕುಸಿದಿದೆ. ರೈತರಿಗೆ ಅಗತ್ಯವಿರುವ ಎಲ್ಲ ನೆರವು ನೀಡುವ ಮೂಲಕ ಉತ್ಪಾದನಾ ಕ್ಷೇತ್ರವನ್ನು ಹೆಚ್ಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


