ವಿಧ್ವಂಸಕ ಕೃತ್ಯಕ್ಕೆ ಸಂಚು: ಕರ್ನಾಟಕದ ಬಂಟ್ವಾಳದಲ್ಲಿ NIA ದಾಳಿ, ತೀವ್ರ ಶೋಧ
ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಸೋಮವಾರ ಬಂಟ್ವಾಳದ ವಿವಿಧೆಡೆ ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ.

ಮಂಗಳೂರು: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಸೋಮವಾರ ಬಂಟ್ವಾಳದ ವಿವಿಧೆಡೆ ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ.
ಶಂಕಿತ ಆರೋಪಿಗಳಿಗೆ ನೆರವಾದವರ ಪತ್ತೆ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡ ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಹಲವೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ ರೀತಿಯಲ್ಲಿ ಹಣ ವರ್ಗಾವಣೆ ಆಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾಣೆ ಮಂಗಳೂರಿನ ಮತ್ತು ಮೆಲ್ಕಾರ್ ನ ಸೈಬರ್ ಸೆಂಟರ್ ಗಳಿಗೂ ಎನ್ಐಎ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಕಲೆ ಹಾಕಿದ್ದಾರೆ. ನಿರ್ದಿಷ್ಟವಾಗಿ ಯಾವ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂಬುದನ್ನು ಎನ್ಐಎ ಇನ್ನೂ ಬಹಿರಂಗಪಡಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


