ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.
ಸಾಗರದಲ್ಲಿ ಸೋಮವಾರ ಮಾತನಾಡಿದ್ದ ಕಟೀಲ್ , ಕೊರೊನಾ ಲಸಿಕೆ ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಸಿದ್ದರಾಮಯ್ಯ ಜನರಿಗೆ ತಪ್ಪು ಮಾಹಿತಿ ನೀಡಿದ್ದರು. ಆದರೂ, ಕಾಂಗ್ರೆಸ್ ನಾಯಕರು ಕೊರೊನಾ ಹೆದರಿ ಲಸಿಕೆ ಹಾಕಿಸಿಕೊಂಡರು. ಲಸಿಕೆ ಪಡೆದರೆ ಮಕ್ಕಳಾಗುವುದಿಲ್ಲ ಎಂಬ ಸಿದ್ದರಾಮಯ್ಯ ಮಾತು ಕೇಳಿ ರಾಹುಲ್ ಗಾಂಧಿ ಮದುವೆ ಆಗುತ್ತಿಲ್ಲ ಎಂದು ವ್ಯಂಗ್ಯ ವಾಡಿದ್ದರು.
ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ನಟ ಚೇತನ್ ಅಹಿಂಸಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ಚೇತನ್, ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ ಎಂದು ಬಿಜೆಪಿ ಸಂಸದ ಕಟೀಲ್ ಹೇಳಿಕೆ ನೀಡಿದ್ದಾರೆ. ಇದು ಅತ್ಯಂತ ಕೆಳಮಟ್ಟದ್ದು ಮತ್ತು ತಾರ್ಕಿಕವಾಗಿ ದೋಷಪೂರಿತ ಹೇಳಿಕೆ ಎಂದಿದ್ದಾರೆ. ರಾಹುಲ್ ಗಾಂಧಿ ಅವರು ಪುರುಷನಿಗಿಂತ ಕಡಿಮೆ ಎಂದು ಬಿಂಬಿಸುವ ಪುರುಷ ಪ್ರಧಾನದ ಪ್ರಚೋದನೆಯು ಹಿಮ್ಮೆಟಿಸುವಿಕೆ ಮತ್ತು ಅನುಚಿತವಾಗಿದೆ ಎಂದು ಹೇಳಿದ್ದಾರೆ.
ಎರಡನೇಯದಾಗಿ ಮಕ್ಕಳನ್ನು ಹೊಂದಲೆಂದೇ ಮದುವೆಯಾಗಬೇಕೇ ಎಂದು ನಳೀನ್ ಕುಮಾರ್ ಕಟೀಲ್ ಅವರನ್ನು ಚೇತನ್ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


