ಉಡುಪಿ: ಸ್ಕೂಟರ್ ನಲ್ಲಿದ್ದವರ ಮೇಲೆ ಹರಿದ ಟ್ಯಾಂಕರ್; ಸ್ಥಳದಲ್ಲೇ ಇಬ್ಬರ ದುರ್ಮರಣ!
ಮೂಲ್ಕಿ ಸೇತುವೆ ಮೇಲೆ ಸ್ಕೂಟರ್-ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉಡುಪಿ: ಮೂಲ್ಕಿ ಸೇತುವೆ ಮೇಲೆ ಸ್ಕೂಟರ್-ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ 61 ವರ್ಷದ ಅಕ್ಬರ್ ಪಾಶ ಹಾಗೂ 46 ವರ್ಷದ ಖತೀಜಾಬಿ ಮೃತ ದುರ್ದೈವಿಗಳು. ದಂಪತಿ ಬೈಕ್ ನಲ್ಲಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಅಪಘಾತ ನಡೆದಿದೆ.
ಟಾರ್ ಹಾಕಲು ಹೆದ್ದಾರಿ ಮೇಲ್ಪದರವನ್ನು ತೆಗೆಯಲಾಗಿತ್ತು. ಹೀಗಾಗಿ ಬೈಕ್ ಸ್ಕಿಡ್ ಆಗಿತ್ತು. ಈ ವೇಳೆ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಬಿದ್ದಿದ್ದರು. ಈ ವೇಳೆ ಎದುರುಗಡೆಯಿಂದ ಬರುತ್ತಿದ್ದ ಟ್ಯಾಂಕರ್ ಸವಾರರ ತಲೆ ಮೇಲೆ ಹರಿದಿದ್ದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


