ರಾಜ್ಯ

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶ ರಸ್ತೆಯಲ್ಲಿ 50 ಖಾಲಿ ಕಾಟ್ರಿಡ್ಜ್ ಪತ್ತೆ, ತನಿಖೆ ಆರಂಭ

ಕರ್ನಾಟಕದ ಮೀಸಲು ಅರಣ್ಯ ಪ್ರದೇಶದಲ್ಲಿ 50 ಖಾಲಿ ಕಾಟ್ರಿಡ್ಜ್ ಪತ್ತೆಯಾಗಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶ ರಸ್ತೆಯಲ್ಲಿ 50 ಖಾಲಿ ಕಾಟ್ರಿಡ್ಜ್ ಪತ್ತೆ, ತನಿಖೆ ಆರಂಭ
ಖಾಲಿ ಕ್ಯಾಟ್ರಿಡ್ಜ್ ಪತ್ತೆ
Published On :

ಚಿಕ್ಕಮಗಳೂರು: ಕರ್ನಾಟಕದ ಮೀಸಲು ಅರಣ್ಯ ಪ್ರದೇಶದಲ್ಲಿ 50 ಖಾಲಿ ಕಾಟ್ರಿಡ್ಜ್ ಪತ್ತೆಯಾಗಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಸಾರಗೋಡು–ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರಿಡ್ಜ್ ಗಳು ಪತ್ತೆಯಾಗಿವೆ. 

ಪೊಲೀಸ್ ಮೂಲಗಳ ಪ್ರಕಾರ ಸಾರಗೋಡು–ತತ್ಕೊಳ ಮೀಸಲು ಅರಣ್ಯ ಪ್ರದೇಶದ ಕನ್ನಗದ್ದೆ ಸಂಪರ್ಕ ರಸ್ತೆ ಬದಿಯಲ್ಲಿ ಈ ಕಾಟ್ರಿಡ್ಜ್ ಗಳು ಪತ್ತೆಯಾಗಿವೆ. ವಿಚಾರ ತಿಳಿದಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲಿಸಿ ಕಾಟ್ರಿಡ್ಜ್ ಗಳನ್ನು ವಶಕ್ಕೆ ಪಡೆದಿದ್ದಾರೆ. 

ಅಂತೆಯೇ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ರಸ್ತೆ ಮಾರ್ಗವಾಗಿ ಸಂಚರಿಸುವ ವಾಹನಗಳ ಮೇಲೆ ನಿಗಾ ಇಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್‌.ಇ.ಕ್ರಾಂತಿ ಅವರು, ‘ರಸ್ತೆ ಬದಿ 50ಕ್ಕೂ ಹೆಚ್ಚು ಖಾಲಿ ಕಾಟ್ರಿಡ್ಜ್ ಗಳು ಸಿಕ್ಕಿವೆ. ಈ ಬಗ್ಗೆ ಪೋಲಿಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.