ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ಇದೇ 11 ರಿಂದ ಎರಡು ದಿನ ಮಹಿಳಾ ಕ್ರೀಡಾಹಬ್ಬ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಮಹಿಳೆಯರಲ್ಲಿ ಕ್ರೀಡಾ ಉತ್ಸಾಹ ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆ ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ “ಮಹಿಳಾ ಕ್ರೀಡಾ ಹಬ್ಬ” ವನ್ನು ಆಯೋಜಿಸಲಾಗುತ್ತಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಕ್ರೀಡೆಗಳು, ಸಾಹಸ ಕ್ರೀಡೆಗಳು, ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲೆ ಮತ್ತು ಕರಕುಶಲಗಳು, ಮನರಂಜನೆ ಮತ್ತು ಮೋಜಿನ ಆಟಗಳು ನಡೆಯಲಿದ್ದು, ಕಾರ್ನಿವಲ್ ಮಳಿಗೆಗಳು ಮತ್ತು ಆಹಾರದ ಮಳಿಗೆಗಳು ಕೂಡ ಇರಲಿವೆ.
ಹಾಕಿ, ಕಬ್ಬಡಿ, ಆರ್ಚರಿ ಮತ್ತು ಸ್ಕೇಟಿಂಗ್, ಕಯಾಕಿಂಗ್ ಮತ್ತು ರಾಫ್ಟಿಂಗ್, ಕುಂಟೆ ಬಿಲ್ಲೆ, ಅಳಿಗುಳಿಮನೆ ಆಟ, ಲಗೋರಿ, ಹಗ್ಗ ಜಗ್ಗಾಟ, ರಂಗೋಲಿ, ಮುಖ ಚಿತ್ರೀಕರಣ, ಕ್ಯಾಲಿಗ್ರಫಿ, ಮೆಹಂದಿ ಮತ್ತು ಮಡಿಕೆ ತಯಾರಿಕೆ, ಮ್ಯೂಸಿಕಲ್ ಚೇರ್, ಕೆರೆ ದಡ, ಬಕೆಟ್ ಬಾಲ್ ಮತ್ತಿತರ ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಚಿವ ಡಾ.ನಾರಾಯಣಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


