ರಾಜ್ಯ

ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿ

ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ.

ಪಟ್ಟಿಯಲ್ಲಿ ಮತದಾರರ ಹೆಸರನ್ನು ಕೈ ಬಿಡಲಾಗಿದೆ ಎಂದು ಶಿವಾಜಿನಗರ ಕ್ಷೇತ್ರದ ಶಾಸಕರು ಹೇಳಿರುವುದು ಕೆಲ ಮಾಧ್ಯಮದಲ್ಲಿ ಪ್ರಕಟವಾಗಿದೆ. ಕ್ಷೇತ್ರದಲ್ಲಿ 91 ಮತಗಟ್ಟೆಗಳ ವ್ಯಾಪ್ತಿಯಲ್ಲಿ ವಾಸವಿಲ್ಲದ, ಮರಣ ಹೊಂದಿರುವ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು, ಮನೆಗೆ ಭೇಟಿ ನೀಡಿ ಸ್ಥಳಾಂತರಗೊಂಡ ಮತದಾರರ ಪಟ್ಟಿಯನ್ನು ತಯಾರಿಸಿದ್ದಾರೆ.

ಇಂಥ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತ್ಯೇಕ ಪ್ರಮಾಣಿತ ಕಾರ್ಯಾಚರಣೆಯ ವಿಧಾನ(ಎಸ್‌ಒಪಿ) ಪಾಲಿಸಬೇಕಿದೆ. ಅದರಂತೆ, 9,195 ಸ್ಥಳಾಂತರಗೊಂಡ ಮತದಾರರಿಗೆ ನೋಟಿಸ್ ನೀಡಲಾಗಿತ್ತು. ಚುನಾವಣಾ ವರ್ಷದ 6 ತಿಂಗಳ ಪೂರ್ವದಲ್ಲಿ ಮತದಾರರ ಪಟ್ಟಿಯಲ್ಲಿ ಯಾವುದೇ ಡಿಲೀಟ್ ಹೆಸರುಗಳನ್ನು ಸ್ವಯಂಪ್ರೇರಿತವಾಗಿ ಸೇರಿಸಲು ಅಧಿಕಾರಿಗಳಿಗೆ ಅವಕಾಶ ಇಲ್ಲ. ಹಾಗಾಗಿ. ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗದ ನಿರ್ದೇಶನಕ್ಕೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಅಲ್ಲದೆ, ಈ ವಿಚಾರ ಕುರಿತು ದೂರುದಾರರೊಬ್ಬರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಿದ 22 ಮತದಾರರ ಕುರಿತು ಪರಿಶೀಲಿಸಲಾಗಿದೆ. ಈ ವೇಳೆ ಮತದಾರರ ಸಾಮಾನ್ಯ ನಿವಾಸಿಗಳು ಎಂಬುದನ್ನು ಖಚಿತ ಪಡಿಸಿಕೊಂಡು ನೀಡಿರುವ ನೋಟೀಸ್‌ಗೆ ಮುಂದಿನ ಪ್ರಕ್ರಿಯೆ ಕೈ ಬಿಡಲಾಗಿದೆ ಎಂದು ನ್ಯಾಯಾಲಯದಲ್ಲಿ ಹೇಳಿಕೆ ಸಲ್ಲಿಸಲಾಗಿದೆ. ಆದ್ದರಿಂದ, ದೂರಿಗೆ ಸಂಬಂಧ ಈ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾವುದೇ ಹೆಸರನ್ನು ಕೈಬಿಟ್ಟಿಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.