ರಾಜ್ಯ

ಚಾಮರಾಜನಗರ: ಸರ್ಕಾರಿ ಗೌರವಗಳೊಂದಿಗೆ ಧ್ರುವ ನಾರಾಯಣ ಅಂತ್ಯಕ್ರಿಯೆ

ಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

ಚಾಮರಾಜನಗರ: ಸರ್ಕಾರಿ ಗೌರವಗಳೊಂದಿಗೆ ಧ್ರುವ ನಾರಾಯಣ ಅಂತ್ಯಕ್ರಿಯೆ
ಧ್ರುವ ನಾರಾಯಣ ಪಾರ್ಥಿವ ಶರೀರ
Published On :

ಚಾಮರಾಜನಗರ: ಹೃದಯಾಘಾತದಿಂದ ನಿನ್ನೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು  ಹೆಗ್ಗವಾಡಿಯಲ್ಲಿ ಇಂದು ಮಧ್ಯಾಹ್ನ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. 

ಇದಕ್ಕೂ ಮುನ್ನ ಅಗಲಿದ ನಾಯಕನಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ರಾಷ್ಟ್ರಗೀತೆ ಮೊಳಗಿಸಿ, ಒಂದು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಮತ್ತಿತರ ಮುಖಂಡರು ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. 

ಶನಿವಾರ ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಮೈಸೂರಿನ ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.