ಮಾರ್ಚ್ 16ಕ್ಕೆ ಬೆಳಗಾವಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ
ದಶಕಕ್ಕೂ ಹಿಂದೆಯೇ ಆರಂಭವಾಗಿದ್ದ ಬಹು ನಿರೀಕ್ಷಿತ ಶಿವ ಶಿವಸೃಷ್ಟಿ (ಶಿವ ಚರಿತ್ರೆ) ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ.

ಬೆಳಗಾವಿ: ದಶಕಕ್ಕೂ ಹಿಂದೆಯೇ ಆರಂಭವಾಗಿದ್ದ ಬಹು ನಿರೀಕ್ಷಿತ ಶಿವ ಶಿವಸೃಷ್ಟಿ (ಶಿವ ಚರಿತ್ರೆ) ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ.
ಶಾಸಕ ಅಭಯ್ ಪಾಟೀಲ್ ಅವರ ಕನಸಿನ ಯೋಜನೆಯನ್ನು ಮಾರ್ಚ್ 16ರಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಉದ್ಘಾಟನೆ ಮಾಡಲಿದ್ದಾರೆ.
ಶಿವಸೃಷ್ಟಿ ಯೋಜನೆಯು ಛತ್ರಪತಿ ಶಿವಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. ಅವರ ಶೌರ್ಯದ ಘಟನೆಗಳನ್ನು ಈ ಯೋಜನೆ ವಿವರಿಸುತ್ತದೆ. ಯೋಜನೆಗೆ ರೂ.10 ಕೋಟಿಯನ್ನು ವೆಚ್ಚ ಮಾಡಲಾಗಿದೆ.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) 2012ರ ನವೆಂಬರ್‌ನಲ್ಲಿ ಯೋಜನೆಯ ಕಾಮಗಾರಿ ಆರಂಭಿಸಿದ್ದು, 2013ರ ಏಪ್ರಿಲ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಕಾರಣಾಂತರಗಳಿಂದಾಗಿ ಕಾಮಗಾರಿ ವಿಳಂಬಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


