ರಾಜ್ಯ

ಹಾವೇರಿ: ರಟ್ಟಿಹಳ್ಳಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ, 20 ಮಂದಿ ಪೊಲೀಸರ ವಶಕ್ಕೆ

ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ.

ಹಾವೇರಿ: ರಟ್ಟಿಹಳ್ಳಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ, 20 ಮಂದಿ ಪೊಲೀಸರ ವಶಕ್ಕೆ
ಹಿಂದೂಪರ ಸಂಘಟನೆಗಳ ಕಾರ್ಯಕರ್ತರು
Published On :

ರಟ್ಟಿಹಳ್ಳಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. 

ಕಾರಂಜಿ ಸರ್ಕಲ್ ನಲ್ಲಿ ನಡೆಯುತ್ತಿದ್ದ ಬೈಕ್ ರ್‍ಯಾಲಿ ವೇಳೆ ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಮಸೀದಿ ಮತ್ತು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲ ಮಕ್ಕಳು ಹಾಗೂ ಮಹಿಳೆಯರಿಗೆ ಕಲ್ಲು ತೂರಾಟದಿಂದ ಗಾಯವಾಗಿದ್ದು, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು 20 ಮಂದಿಯನ್ನು ವಶಕ್ಕೆ ಪಡೆದಿದ್ದು, ಹೈ ಆಲರ್ಟ್ ಘೋಷಿಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಸಂಗೊಳ್ಳಿ ರಾಯಣ್ಣ ಮೂರ್ತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿತ್ತು. ಕೈಯಲ್ಲಿ ಕಲ್ಲು ಹಿಡಿದು ನಿಂತಿದ್ದ ಯುವಕರು, ಬ್ಯಾರಿಕೇಡ್ ಕಿತ್ತೆಸೆದು ಮೆರವಣಿಗೆಗೆ ಅಡ್ಡಿಪಡಿಸಿದ್ದರು. ಗಲಾಟೆ ನಡೆದಿದ್ದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಇಂದು ಬೃಹತ್ ಬೈಕ್ ರ್‍ಯಾಲಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.